ಬೆಂಗಳೂರು,ಜೂ,25,2020(www.justkannada.in): ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದ್ದು ಅದರಲ್ಲು ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ರಣಕೇಕೆ ಹಾಕುತ್ತಿದೆ. ಹೀಗಾಗಿ ಕೊರೋನಾ ವಿರುದ್ದ ಹೋರಾಡಲು ಸರ್ಕಾರದ ಜತೆ ಕೈ ಜೋಡಿಸಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ರಾಜಧಾನಿ ಬೆಂಗಳೂರಿನಲ್ಲಿ ತೀವ್ರವಾಗಿ ಹರಡುತ್ತಿರುವ ಕೋವಿಡ್ ಸೋಂಕು ಮುಂದಿನ ಹಂತಗಳಲ್ಲಿ ಹರಡದಂತೆ ತಡೆಯಲು ಹೋಮ್ ಕ್ವಾರಂಟೈನ್ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಿ ಕಡ್ಡಾಯಗೊಳಿಸಲಾಗಿದೆ. ಈ ನಿಯಮಗಳ ಪಾಲನೆಯ ಮೇಲ್ವಿಚಾರಣೆ ನಡೆಸಲು ಸ್ವಯಂ ಸೇವಕರಾಗಿ ನೀವೂ ಸಹ ಕಾರ್ಯ ನಿರ್ವಹಿಸಬಹುದು ಎಂದು ಬೆಂಗಳೂರು ಜನತೆಯಲ್ಲಿ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.
ಸರ್ಕಾರದ ಹೋರಾಟದೊಂದಿಗೆ ಜತೆಯಾಗಲು ಸ್ವಯಂಪ್ರೇರಿತರಾಗಿ ನೋಂದಾಯಿಸಿಕೊಳ್ಳುವ ಮೂಲಕ ಸೋಂಕು ನಿಯಂತ್ರಿಸುವ ಕೆಲಸದಲ್ಲಿ ಕೈಜೋಡಿಸಬಹುದು.. ಬಿಬಿಎಂಪಿಯ ನಾಗರೀಕ ಕ್ವಾರಂಟೈನ್ ಸ್ಕ್ವಾಡ್ ಸದಸ್ಯರಾಗಲು ಈ https://register.quarantinesquad.in/#/p/register ಲಿಂಕ್ ಗೆ ನಿಮ್ಮ ಮೊಬೈಲ್ ಸಂಖ್ಯೆಯನ್ನ ನೋಂದಾಯಿಸಿಕೊಳ್ಳಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
Key words: fight –against- Corona-Register – volunteer-CM BS yeddyurappa