ಮಂಗಳೂರು, ಡಿಸೆಂಬರ್ 21, 2019 (www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಈಗಾಗಲೇ ರಾಜ್ಯದಲ್ಲಿ ಪ್ರತಿಭಟನೆ ಆರಂಭವಾಗಿದೆ. 144 ಸೆಕ್ಷನ್ ಜಾರಿಯಲ್ಲಿದ್ದರೂ ಪ್ರತಿಭಟನೆಗಳು ಅಲ್ಲಲ್ಲಿ ನಡೆಯುತ್ತಿವೆ.
ಹಾಗಾಗಿ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. ಅದರಲ್ಲೂ ಮಂಗಳೂರಿನಲ್ಲೂ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆ ಕರ್ಫ್ಯೂ ಜಾರಿ ಮಾಡಲಾಗಿದೆ. ಯಾರೊಬ್ಬರೂ ಮನೆಯಿಂದ ಹೊರ ಬರದಂತೆ ಪೊಲೀಸರು ಹೇಳಿದ್ದಾರೆ. ಜೊತೆಗೆ ಏನಾದರೂ ತುರ್ತು ಸಹಾಯ ಬೇಕಾಗಿದ್ದಲ್ಲಿ ಪೊಲೀಸರಿಗೆ ಕರೆ ಮಾಡುವಂತೆಯೂ ತಿಳಿಸಿದ್ದಾರೆ.
ಆದರೆ ಇಲ್ಲೊಂದು ಯುವಕರ ಗುಂಪು ಮನೆಯಿಂದ ಹೊರ ಬಂದು ಪೊಲೀಸರ ಬಳಿ ಸುಳ್ಳು ಹೇಳಿದ್ದಾರೆ. ಆಸ್ಪತ್ರೆಗೆ ಹೋಗುವ ನೆಪ ಹೇಳಿರುವ ಯುವಕರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ನಲ್ಲಿ ಈ ಘಟನೆ ನಡೆದಿದೆ. ಸುಳ್ಳು ಹೇಳಿ ಹೊರ ಬಂದಿದ್ದ ಯುವಕರು ಪೊಲೀಸರಿಂದ ಏಟು ತಿಂದಿದ್ದಾರೆ.