ಬೆಳಗಾವಿ, ಮೇ,13,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಮತ ಎಣಿಕೆ ದಿನ ಬೆಳಗಾವಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿದ ದೂರು ದಾಖಲಾಗಿದೆ.
ಟಿಳಕವಾಡಿ ಪೊಲೀಸ್ ಠಾಣೆ ಸಿಪಿಐ ದಯಾನಂದ ಶೇಗುಣಸಿ ಅವರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಡಿ ಐಪಿಸಿ ಕಲಂ 153, 153(ಬಿ)ರಡಿ ಪ್ರಕರಣ ದಾಖಲಾಗಿದೆ.
ಮೇ13 ರಂದು ಬೆಳಗಾವಿಯಲ್ಲಿ ಮತ ಎಣಿಕೆ ಕೇಂದ್ರದ ಹೊರಗೆ ಆಸೀಫ್ ಸೇಠ್ ಗೆಲುವು ಖಚಿತವಾಗುತ್ತಿದ್ದಂತೆಯೇ ಅಪಾರ ಸಂಖ್ಯೆಯ ಯುವಕರು ಸುತ್ತ ಸೇರಿದ್ದರು. ಬಣ್ಣಗಳನ್ನು ಎರಚಿ, ಸಂಗೀತ ಹಾಕಿಕೊಂಡು ಕುಣಿದಿದ್ದರು. ಈ ವೇಳೆ ಕಾಂಗ್ರೆಸ್ ಧ್ವಜ ಹಿಡಿದು ಬಂದ ಕೆಲವರು ಪಾಕ್ ಪರ ಘೋಷಣೆ ಕೂಗಿದ್ದರು ಎನ್ನಲಾಗಿದೆ. ಹತ್ತಿರದಲ್ಲೇ ಇದ್ದ ಕೆಲವು ಪೊಲೀಸರು ಯುವಕರ ಬಳಿ ಹೋಗಿ ತಾಕೀತು ಮಾಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು.
Key words: File – voluntary -complaint -against – shouted- pro-Pak- slogans.