ಬೆಂಗಳೂರು, ಡಿ.19,2019(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಹಿನ್ನೆಲೆ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದೆ.
ರಾಜ್ಯಸಭಾ ಸದಸ್ಯ ರಾಜೀವ್ ಗೌಡ ಮತ್ತು ಶಾಸಕಿ ಸೌಮ್ಯಾ ರೆಡ್ಡಿ ಅವರು ನಿಷೇಧಾಜ್ಞೆ ಜಾರಿ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿಸಲ್ಲಿಸಿದ್ದಾರೆ. ಹಲವು ಸಂಘ ಸಂಸ್ಥೆಗಳು ಸಹ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿವೆ ಎನ್ನಲಾಗುತ್ತಿದೆ.
ಪ್ರತಿಭಟನೆಗಳನ್ನ ಹತ್ತಿಕ್ಕಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಅರ್ಜಿ ಸಲ್ಲಿಸಲಾಗಿದ್ದು ತುರ್ತು ವಿಚಾರಣೆ ನಡೆಸಯವಂತೆ ಅರ್ಜಿದಾರರ ಪರ ವಕೀಲರು ಹೈಕೋರ್ಟ್ ಗೆ ಮನವಿ ಮಾಡಿದರು. ಈ ಹಿನ್ನೆಲೆ ನಾಳೆ ವಿಚಾರಣೆ ನಡೆಸಲು ಹೈಕೋರ್ಟ್ ಸಮ್ಮತಿ ನೀಡಿದೆ. ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
Key words: Filing- application – High Court – question-144 section enforcement