ಸಿಇಟಿ, ನೀಟ್, ಜೆಇಇ ಅರ್ಜಿ ತುಂಬುವ ವಿಧಾನ: ವಿಶೇಷ ತರಬೇತಿಗೆ ವ್ಯವಸ್ಥೆ

 

ಬೆಂಗಳೂರು, ಜ.30, 2022 :(www.justkannada.in news) ಸಿಇಟಿ, ನೀಟ್, ಜೆಇಇ ಮುಂತಾದ ಉನ್ನತ ಹಂತದ ಪರೀಕ್ಷೆಗಳಿಗೆ ಅರ್ಜಿ ತುಂಬುವಾಗ ಅಭ್ಯರ್ಥಿಗಳು ತಪ್ಪು ಮಾಡುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದಂತೆ ಪದವಿಪೂರ್ವ ಮತ್ತು ಪದವಿ ಹಂತಗಳಲ್ಲಿ ಆಯಾ ಕಾಲೇಜುಗಳಲ್ಲಿಯೇ ವಿಶೇಷ ತರಬೇತಿ ನೀಡಲು ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಭ್ಯರ್ಥಿಗಳು ಹೆಚ್ಚಾಗಿ ಈ ಅರ್ಜಿಗಳಲ್ಲಿ ವಾರ್ಷಿಕ ಆದಾಯ, ಕೆಟಗರಿ, ಹೆಸರು, ಹುಟ್ಟಿದ ದಿನಾಂಕ, ಕೋರ್ಸ್ ಆಯ್ಕೆ ಮುಂತಾದ ಮಾಹಿತಿಗಳನ್ನು ಭರ್ತಿ ಮಾಡುವಾಗ ತಪ್ಪು ಮಾಡುತ್ತಿರುವುದು ಕಂಡುಬಂದಿದೆ. ಇದರಿಂದಾಗಿ ಹೆಚ್ಚಿನ ಅರ್ಜಿಗಳು ತಿರಸ್ಕೃತವಾಗುತ್ತಿದ್ದು, ಉನ್ನತ ಶಿಕ್ಷಣದ ಅವಕಾಶದಿಂದ ವಂಚಿತರಾಗುತ್ತಿದ್ದಾರೆ. ಇದನ್ನು ಗಮನಿಸಿ `ಗೆಟ್ ಸೆಟ್ ಗೋ’ ಮೂಲಕ ಈ ತರಬೇತಿ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದಿದ್ದಾರೆ.

`ಗೆಟ್ ಸೆಟ್ ಗೋ’ ಮೂಲಕ ಈ ಪರೀಕ್ಷೆಗಳಿಗೆ ಹೆಚ್ಚಾಗಿ ಎಂಜಿನಿಯರಿಂಗ್, ವೈದ್ಯಕೀಯ ಮತ್ತು ಸ್ನಾತಕೋತ್ತವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುತ್ತಿದ್ದು, ಇವರಿಗೆ ಈ ತರಬೇತಿಯಿಂದ ಪ್ರಯೋಜನವಾಗಲಿದೆ. ತರಬೇತಿಯ ಜತೆಗೆ ಸಾಮಾಜಿಕ ಮಾಧ್ಯಮಗಳು, ವೆಬ್-ಸೈಟುಗಳು ಮತ್ತು ದಿನಪತ್ರಿಕೆಗಳಲ್ಲಿ ಈ ಅರ್ಜಿ ತುಂಬುವ ಸರಿಯಾದ ವಿಧಾನದ ಬಗ್ಗೆ ವ್ಯಾಪಕವಾಗಿ ಜಾಹೀರಾತನ್ನು ಕೂಡ ನೀಡುವ ಮೂಲಕ ಅರಿವು ಮೂಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಎನ್ಇಪಿ ಜಾರಿ ಹೊಣೆ: ಹೊಸ ಹುದ್ದೆ ಸೃಷ್ಟಿಗೆ ನಿರ್ದೇಶನ

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯಗಳನ್ನು ಸಮರ್ಪಕವಾಗಿ ಜಾರಿಗೆ ತರುವ ಸಲುವಾಗಿ ಉನ್ನತ ಶಿಕ್ಷಣ ಇಲಾಖೆಯ ವಿಶ್ವವಿದ್ಯಾಲಯ ವಿಭಾಗಕ್ಕೆ ಐಎಎಸ್ ಅಧಿಕಾರಿಯೊಬ್ಬರನ್ನು ನಿಯುಕ್ತಿಗೊಳಿಸಲು ಅಗತ್ಯ ಹುದ್ದೆ ಸೃಷ್ಟಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿದ್ದಾರೆ.

`ಎನ್ಇಪಿಯನ್ನು ಅನುಷ್ಠಾನಗೊಳಿಸಲು ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳೊಂದಿಗೆ ಸಮನ್ವಯ ಸಾಧಿಸುವುದು ಮತ್ತು ಮಾಹಿತಿ ಕ್ರೋಡೀಕರಿಸುವುದು ಮಹತ್ತ್ವದ ಜವಾಬ್ದಾರಿಯಾಗಿದೆ. ಜತೆಗೆ, ವಿಶ್ವವಿದ್ಯಾಲಯಗಳ ಬೇಡಿಕೆಗಳನ್ನು ಆಲಿಸಿ, ಅವುಗಳಿಗೆ ಸ್ಪಂದಿಸುವುದು ಕೂಡ ಮುಖ್ಯವಾಗಿದೆ. ಹೀಗಾಗಿ, ಹೊಸ ಹುದ್ದೆಯ ಸೃಷ್ಟಿ ಅಗತ್ಯವಾಗಿದೆ’ ಎಂದು ಅವರು ಹೇಳಿಕೆಯಲ್ಲಿ ವಿವರಿಸಿದ್ದಾರೆ.

key words : Filling in the application- for professional courses

Filling in the application for professional courses : Minister instructs to conduct training at the college level

Bengaluru: Dr.C.N.Ashwatha Narayana, Minister for Higher Education, has instructed the Director, Department of Pre-University Education, to conduct special training for students at respective college levels about filling in applications in an appropriate manner while submitting for CET/NEET/JEE through GET SET GO.

It has been noticed, that many students seeking entry for Engineering, Medical, and other Professional Courses through examinations conducted by Karnataka Examination Authority (KEA) are making mistakes while filling in columns such as Annual Income, Category, Name, Date of Birth, Course Selection, etc. for which opportunity to become eligible is being lost. To avoid such mistakes and thereby increase the chances of eligibility for professional courses, training needs to be conducted, he has told.

Minister Narayana has also advised bringing awareness among students through social media, websites, and newspaper advertisements