ಬೆಂಗಳೂರು, ಜನವರಿ 30, 2022 (www.justkannada.in): ಖಾಲಿ ಇರುವ ಬ್ಯಾಗ್ ಲಾಗ್ ಹುದ್ದೆಗಳನ್ನು ಮುಂದಿನ ಮೂರು ತಿಂಗಳಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆ, ನಿಗಮ ಮಂಡಳಿ ಮತ್ತು ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಗ್ ಲಾಗ್ ಹುದ್ದೆಗಳನ್ನು ಮುಂದಿನ ಮೂರು ತಿಂಗಳಲ್ಲಿ ಭರ್ತಿ ಮಾಡಲಾಗುವುದು. ಸರ್ಕಾರಿ, ಅನುದಾನಿತ ತಾಂತ್ರಿಕ ಕಾಲೇಜು ಮತ್ತು ವಿಶ್ವ ವಿದ್ಯಾಲಯಗಳಲ್ಲಿ ಪರಿಶಿಷ್ಟ ವರ್ಗಕ್ಕೆ ಸೇರಿದ 446 ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ 436 ಸೇರಿದಂತೆ ಒಟ್ಟು 882 ಹುದ್ದೆಗಳ ನೇಮಕಾತಿ ಬಾಕಿ ಇದೆ ಎಂದು ಸಚಿವರು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆ, ನಿಗಮ ಮಂಡಳಿ ಮತ್ತು ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಗ್ ಲಾಗ್ ಹುದ್ದೆಗಳನ್ನು ಮುಂದಿನ ಮೂರು ತಿಂಗಳಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಗೋವಿಂದ ಕಾರಜೋಳ ಹೇಳಿದ್ದಾರೆ.