ಅಹಮದಾಬಾದ್,ಮಾರ್ಚ್,13,2023(www.justkannada.in): ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯೆ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.
ಈ ಮೂಲಕ ಭಾರತ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-1 ಅಂತರದಿಂದ ಸರಣಿಯನ್ನ ವಶಕ್ಕೆ ಪಡೆಯುವುದರ ಜೊತೆಗೆ WTC ಫೈನಲ್ ಲಗ್ಗೆ ಇಟ್ಟಿದೆ.
ಇದರೊಂದಿಗೆ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಬಾರ್ಡರ್ ಗವಾಸ್ಕರ್ ಟ್ರೋಫಿ ಗೆದ್ದುಕೊಂಡಿದೆ. ಅಲ್ಲದೆ ಈ ಸರಣಿಯನ್ನು ತನ್ನ ಬುಟ್ಟಿಗೆ ಹಾಕಿಕೊಳ್ಳುವುದರೊಂದಿಗೆ ತವರಿನಲ್ಲಿ ಸತತ 16ನೇ ಸರಣಿ ಗೆದ್ದ ದಾಖಲೆಯನ್ನೂ ಟೀಂ ಇಂಡಿಯಾದ ಬರೆದಿದೆ.
ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 480 ರನ್ ಬಾರಿಸಿ ಆಲ್ ಔಟ್ ಆಯಿತು. ಉಸ್ಮಾನ್ ಖವಾಜಾ ಆಸ್ಟ್ರೇಲಿಯಾ ಪರ ಗರಿಷ್ಠ 180 ರನ್ ಕ್ಯಾಮರೂನ್ ಗ್ರೀನ್ ಕೂಡ 114 ರನ್ ಬಾರಿಸಿದ್ದರು.
ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ನೀಡಿದ್ದ 480 ರನ್‌ಗಳ ಟಾರ್ಗೆಟ್ ಬೆನ್ನಟ್ಟಿದ ಟೀಂ ಇಂಡಿಯಾ 571 ರನ್‌ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಅಂತ್ಯಗೊಳಿಸಿತು. ಈ ಮೂಲಕ 91 ರನ್‌ಗಳ ಮುನ್ನಡೆ ಪಡೆದುಕೊಂಡಿತು.ತಂಡದ ಪರ ವಿರಾಟ್ ಕೊಹ್ಲಿ 364 ಎಸೆತಗಳಲ್ಲಿ 15 ಬೌಂಡರಿ ಸಹಿತ 186 ರನ್ ಗಳಿಸಿದರು. ವಿರಾಟ್ ನಂತರ ಶುಭಮನ್ ಗಿಲ್ 128 ರನ್ ಗಳ ಶತಕದ ಇನ್ನಿಂಗ್ಸ್ ಆಡಿದರು.
ಅಕ್ಷರ್ ಪಟೇಲ್ 79 ರನ್‌ಗಳ ಬಿರುಸಿನ ಇನ್ನಿಂಗ್ಸ್ ಆಡಿದರೆ, ವಿರಾಟ್ ಕೊಹ್ಲಿಗೆ ಉತ್ತಮ ಬೆಂಬಲ ನೀಡುವ ಮೂಲಕ ಶ್ರೀಕರ್ ಭರತ್ 44 ರನ್ ಕೊಡುಗೆ ನೀಡಿದರು. ಚೇತೇಶ್ವರ ಪೂಜಾರ 42 ರನ್ ಗಳಿಸಿ ಮೈದಾನದಿಂದ ನಿರ್ಗಮಿಸಿದರು. ಇನ್ನು ಮೊಹಮ್ಮದ್ ಶಮಿ ಮತ್ತು ಉಮೇಶ್ ಯಾದವ್ ಇಬ್ಬರೂ ಖಾತೆ ತೆರೆಯಲಿಲ್ಲ. ಗಾಯದ ಸಮಸ್ಯೆಯಿಂದ ಶ್ರೇಯಸ್ ಅಯ್ಯರ್ ಮೈದಾನಕ್ಕೆ ಬರಲು ಸಾಧ್ಯವಾಗಲಿಲ್ಲ. ಆಸ್ಟ್ರೇಲಿಯಾ ಪರ ನಾಥನ್ ಲಿಯಾನ್ ಮತ್ತು ಟಾಡ್ ಮರ್ಫಿ ತಲಾ 3 ವಿಕೆಟ್ ಪಡೆದರೆ, ಮಿಚೆಲ್ ಸ್ಟಾರ್ಕ್ ಮತ್ತು ಮ್ಯಾಥ್ಯೂ ಕುಹ್ನೆಮನ್ ತಲಾ 1 ವಿಕೆಟ್ ಪಡೆದರು.
2ನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ಆಸ್ಪ್ಟ್ರೇಲಿಯಾ ಎರಡು ವಿಕೆಟ್ ನಷ್ಟಕ್ಕೆ 175 ರನ್ ಗಳಿಸುವುದರೊಂದಿಗೆ ಪಂದ್ಯ ಡ್ರಾ ಆಯಿತು.
Key words: final Test – draw- Team India- won – series – WTC- final.