ಬೆಂಗಳೂರು, ಆಗಸ್ಟ್ 8,2023(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ಹಾಕಿದ ಬಗ್ಗೆ ಕೋರ್ಟ್ ಛೀಮಾರಿ ಹಾಕಿದ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು ಬ್ಯಾನರ್ ಗಳನ್ನು ತೆರವುಗೊಳಿಸಲು ಮುಂದಾಗಿದೆ.
ಈ ಕುರಿತು ಕುಮಾರಕೃಪಾ ಗೆಸ್ಟ್ಹೌಸ್ನಲ್ಲಿ ಮಾತನಾಡಿದ ನಗರಾಭಿವೃದ್ಧಿ ಸಚಿವ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್, ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸುವಂತಿಲ್ಲ. ಅಕ್ರಮ ಫ್ಲೆಕ್ಸ್ ಬ್ಯಾನರ್ ಹಾಕಿದರೆ 50 ಸಾವಿರ ರೂ. ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು ನಗರದ ಸೌಂದರ್ಯ ಕಾಪಾಡಲು ಬ್ಯಾನರ್ ಗಳನ್ನು ನಿಷೇಧಿಸುತ್ತಿದ್ದೇವೆ. ಮುಖ್ಯಮಂತ್ರಿ, ಡಿಸಿಎಂ, ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಯಾವುದೇ ರೀತಿಯ ಫ್ಲೆಕ್ಸ್ ಹಾಕುವಂತಿಲ್ಲ. ಸರ್ಕಾರಿ ಜಾಹೀರಾತು ಪ್ರಕಟಿಸುವ ಬಗ್ಗೆ ಶೀಘ್ರದಲ್ಲೇ ನಿಯಮ ರೂಪಿಸ್ತೇವೆ. ಬ್ಯಾನರ್ ಹಾಕದಂತೆ ವೈಯಕ್ತಿಕವಾಗಿ ವಿನಮ್ರತೆಯಿಂದ ಮನವಿ ಮಾಡಿಕೊಳ್ಳುತ್ತೇನೆ. ಧಾರ್ಮಿಕ, ರಾಜಕೀಯ, ಸಾಮಾಜಿಕ ಫ್ಲೆಕ್ಸ್ ಹಾಕದಂತೆ ಮನವಿ ಮಾಡುವೆ. ಆಗಸ್ಟ್ 15 ರ ಒಳಗಾಗಿ ನಗರದಲ್ಲಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್ಗಳನ್ನು ತೆರವು ಮಾಡುತ್ತೇವೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.
Key words: fine – illegal- flex- banner – Bangalore-DCM- DK Shivakumar