ಕೋಲಾರ,ಆಗಸ್ಟ್,3,2021(www.justkannada.in): ಕೊರೊನಾ ಹಿನ್ನೆಲೆ ರಾಜ್ಯದಲ್ಲೆಇ ಹೆಚ್ಚಿನ ಜನ ಸೇರುವ ಸಭೆ ಸಮಾರಂಭಗಳಿಗೆ ನಿರ್ಬಂಧವಿದೆ. ಈ ಮಧ್ಯೆ ಕೊರೋನಾ ನಿಯಮ ಉಲ್ಲಂಘನೆ ಆರೋಪದ ಮೇಲೆ ಮಾಜಿ ಸಚಿವ ವರ್ತೂರು ಪ್ರಕಾಶ್ ಸೇರಿ 105 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಸಭೆ ನಡೆಸಿ ಕಾರ್ಯಕರ್ತರಿಗೆ ಬಿರಿಯಾನಿ ಊಟ ಹಾಕಿಸಿದ ಮಾಜಿ ಸಚಿವ ವರ್ತೂರು ಪ್ರಕಾಶ್ ಗೆ ಇದೀಗ ಸಂಕಷ್ಟ ಎದುರಾಗಿದೆ.ಕೋಲಾರ ನಗರ ಠಾಣೆ ವ್ಯಾಪ್ತಿಯಲ್ಲಿ ಕೋವಿಡ್ ನಿಯಮ ಪಾಲಿಸದೇ, ಮಾಜಿ ಸಚಿವ ವರ್ತೂರು ಪ್ರಕಾಶ್ ಕೋಲಾರ ನಗರದಲ್ಲಿ ಸಭೆ ನಡೆಸಿ, ಕಾರ್ಯಕರ್ತರಿಗೆ ಬಿರಿಯಾನಿ ಊಟ ಹಾಕಿಸಿದ್ದರು. ಈ ಕಾರ್ಯಕ್ರಮದಲ್ಲಿ ನೂರಾರು ಜನರು ಭಾಗವಹಿಸುವ ಮೂಲಕ, ಕೋವಿಡ್ ನಿಯಮ ಉಲ್ಲಂಘನೆ ಮಾಡಲಾಗಿತ್ತು.
ಈ ಸಂಬಂಧ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ, ಸಭೆ ನಡೆಸಿದ್ದಲ್ಲದೇ, ಕಾರ್ಯಕರ್ತರಿಗೆ ಊಟ ಹಾಕಿಸಿದ್ದರಿಂದಾಗಿ, ವಿಪತ್ತು ನಿರ್ವಹಣಾ ಕಾಯ್ದೆಯ ಅಡಿಯಲ್ಲಿ ವರ್ತೂರು ಪ್ರಕಾಶ್ ಸೇರಿ 105 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
Key words: FIR -against -105 persons -including -former minister- Varthoor Prakash.