ಬೆಂಗಳೂರು,ಏಪ್ರಿಲ್,24,2023(www.justkannada.in): ಚುನಾವಣಾ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಏಪ್ರಿಲ್ 23 ರಂದು ರ್ಯಾಡಿಸನ್ ಬ್ಲೂ ಹೋಟೆಲ್ ನಲ್ಲಿ ಶ್ರೀನಿವಾಸ್ ಅವರು ಸಭೆ ನಡೆದುತ್ತಿದ್ದ ವೇಳೆ ಚುನಾವಣಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಚುನಾವಣಾ ಅಧಿಕಾರಿಗಳ ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ದಾಳಿ ವೇಳೆ ಸಹಕರಿಸದೇ ಎಸ್ಟಿಎಫ್ ಅಧಿಕಾರಿಗಳ ವಿರುದ್ಧ ವಾಗ್ವಾದ ಮಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಅಧಿಕಾರಿಗಳು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಅಧಿಕಾರಿಗಳ ದೂರು ಆಧರಿಸಿ ಎಫ್ ಐಆರ್ ದಾಖಲಾಗಿದೆ.
Key words: FIR -against -National Youth Congress -President -Srinivas.