ಬೆಂಗಳೂರು,ಅಕ್ಟೋಬರ್,28,2020(www.justkannada.in): ವೋಟರ್ ಐಡಿ ಸಂಗ್ರಹಿಸಿ ಹಣ ಹಂಚಿಕೆ ಆರೋಪದ ಮೇಲೆ ಕಾಂಗ್ರೆಸ್ ದೂರು ನೀಡಿದ ಹಿನ್ನೆಲೆ ಆರ್.ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನವೆಂಬರ್ 3 ರಂದು ಆರ್.ಆರ್ ನಗರ ಉಪಚುನಾವಣೆ ನಡೆಯಲಿದ್ದು ಈ ನಡುವೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಮತದಾರರಿಂದ ವೋಟರ್ ಐಡಿ ಸಂಗ್ರಹಿಸಿ ಸಾವಿರಾರು.ರೂ ಹಣವನ್ನು ಹಂಚುತ್ತಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿತ್ತು.
ಕಾಂಗ್ರೆಸ್ ದೂರಿನ ಮೇರೆಗೆ ಇದೀಗ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಮುನಿರತ್ನ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎನ್ನಲಾಗಿದೆ.
Key words: FIR -against -RN Nagar -BJP candidate -Muniratna