ಬೆಂಗಳೂರು,ಜನವರಿ,1,2025 (www.justkannada.in): ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ ಪೋಸ್ಟರ್ ಅಭಿಯಾನ ನಡೆಸಿದ್ದ ಬಿಜೆಪಿ ನಾಯಕರ ವಿರುದ್ದ ಎಫ್ ಐಆರ್ ದಾಖಲಾಗಿದೆ.
ಪರಿಷತ್ ಸದಸ್ಯ ಸಿ.ಟಿ ರವಿ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಎನ್ ರವಿ ಕುಮಾರ್ ಸೇರಿದಂತೆ ಇತರೆ 13 ಬಿಜೆಪಿ ಮುಖಂಡರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅಕ್ರಮವಾಗಿ ರಸ್ತೆಯಲ್ಲಿ ಗುಂಪು ಸೇರಿ ಸಾರ್ವಜನಿಕರಿಗೆ ಅಡ್ಡಿ ಆರೋಪದಲ್ಲಿ ಈ ಕೇಸ್ ದಾಖಲಾಗಿದೆ.
ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಪೋಸ್ಟರ್ ಅಭಿಯಾನವನ್ನು ಆರಂಭಿಸಲಾಗಿತ್ತು. ಬೆಂಗಳೂರಿನ ಹಲವೆಡೆ ಗೋಡೆಗಳಿಗೆ ಬಿಜೆಪಿಯಿಂದ ಪೋಸ್ಟರ್ ಕೂಡ ಅಂಟಿಸಲಾಗಿತ್ತು.
ಈ ಹಿನ್ನಲೆಯಲ್ಲಿ ಪಿಎಸ್‌ಐ ಶಶಿಧರ ವಣ್ಣೂರ ಅವರು ನೀಡಿದಂತ ದೂರಿನ ಆಧಾರದ ಮೇಲೆ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಸಿ.ಟಿ ರವಿ ಸೇರಿದಂತೆ 13 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
Key words: FIR, against, 13 people, C.T. Ravi