ಬೆಂಗಳೂರು, ಸೆಪ್ಟಂಬರ್,19,2024 (www.justkannada.in): ನಗರದ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು ಕೆಲ ನರ್ಸ್ ಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಆಸ್ಪತ್ರೆಯ ಕಾರ್ಡಿಯಾಕ್ ಐಸಿಯು ವಾರ್ಡ್ನ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದುರಂತದಲ್ಲಿ ನರ್ಸ್ಗಳ ಸಮಯಪ್ರಜ್ಞೆಯಿಂದ 8 ರೋಗಿಗಳು ಪಾರಾಗಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.
ಅಗ್ನಿ ಅವಘಡ ಕುರಿತು ಪ್ರತಿಕ್ರಿಯಿಸಿದ ಎಂ.ಎಸ್.ರಾಮಯ್ಯ ಆಸ್ಪತ್ರೆ ಸಿಇಓ ಶ್ರೀನಿವಾಸ್ ಮೂರ್ತಿ, ‘ಇಂದು ಮಧ್ಯಾಹ್ನ ಕಾರ್ಡಿಕ್ ಯುನಿಟ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಎಲ್ಲಾ ಸಿಬ್ಬಂದಿ ರೋಗಿಗಳನ್ನ ಶಿಫ್ಟ್ ಮಾಡಿಲಾಗಿದೆ. ಆಸ್ಪತ್ರೆಯಲ್ಲಿ ಇದ್ದ ಅಗ್ನಿಶಾಮಕ ಪರಿಕರಗಳಿಂದ ಬೆಂಕಿ ನಂದಿಸುವ ಪ್ರಯತ್ನ ಆಗಿದೆ. ಹೀಗಾಗಿ ಆಸ್ಪತ್ರೆಯ ಅರ್ಧದಷ್ಟು ಭಾಗದಲ್ಲಿ ವಿದ್ಯುತ್ ಸಂಪರ್ಕ ನಿಲ್ಲಿಸಿ, ರೋಗಿಗಳನ್ನ ಶಿಫ್ಟ್ ಮಾಡಲಾಗಿದೆ. ಸರ್ಕ್ಯೂಟ್ನಿಂದ ಘಟನೆ ನಡೆದಿದೆ ಎನ್ನಿಸುತ್ತಿದೆ ಎಂದಿದ್ದಾರೆ.
Key words: fire accident, MS Ramaiah Hospital, Bangalore