ಬೀದರ್,ಜನವರಿ,16,2025 (www.justkannada.in): ಹಾಡಹಗಲೇ ಎಟಿಎಂಗೆ ಹಣ ಹಾಕಲು ಬಂದ ಎಸ್ ಬಿಐ ಬ್ಯಾಂಕ್ ಸಿಬ್ಬಂದಿಗಳ ಮೇಲೆ ಗುಂಡು ಹಾರಿಸಿ ದರೋಡೆಕೋರರು ಲಕ್ಷಾಂತರ ರೂ. ಹಣ ದೋಚಿ ಪರಾರಿಯಾಗಿರುವ ಘಟನೆ ಬೀದರ್ ನ ಎಸ್‌ಬಿಐ ಮುಖ್ಯ ಕಚೇರಿ ಮುಂದೆ ನಡೆದಿದೆ.
ATMಗೆ ಹಣ ಹಾಕಲು ಬಂದ ಸಿಬ್ಬಂದಿಗಳಿಗೆ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿದ ದುಷ್ಕರ್ಮಿಗಳು, ಐದು ಸುತ್ತು ಗುಂಡು ಹಾರಿಸಿ ಬಳಿಕ ಲಕ್ಷಾಂತರ ಹಣ ದೋಚಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿಯಲ್ಲಿ ಓರ್ವ ಸಿಬ್ಬಂದಿ ಸಾವನ್ನಪ್ಪಿದ್ದು ಮತ್ತೋರ್ವ ಸಿಬ್ಬಂದಿಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಎಸ್‌ಬಿಐ ಬ್ಯಾಂಕ್ ಸಿಬ್ಬಂದಿ PSC ವಾಹನದಲ್ಲಿ ಲಕ್ಷಾಂತರ ಹಣವನ್ನು ತೆಗೆದುಕೊಂಡು ಬಂದಿದ್ದರು. ಎಟಿಎಂಗೆ ಹಣ ಹಾಕಬೇಕು ಅನ್ನುವಷ್ಟರಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿ ಹಣ ದರೋಡೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Key words: fire, ATM, money, Robbery, employee, dies