ಬೆಂಗಳೂರು, ಫೆಬ್ರವರಿ, 6,2025 (www.justkannada.in): ನಿರ್ಮಾಣ ಹಂತದ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೀಗೆಹಳ್ಳಿ ಗೇಟ್ ಬಳಿ ನಡೆದಿದೆ.
ಉತ್ತರ ಪ್ರದೇಶ ಮೂಲದ ಉದಯ್ ಭಾನು(40), ಬಿಹಾರ ಮೂಲದ ರೋಷನ್(23) ಮೃತಪಟ್ಟ ಕಾರ್ಮಿಕರು. ಗುತ್ತಿಗೆದಾರ ಮತ್ತು ಇಂಜಿನಿಯರ್ ಸತೀಶ್ಗೆ ಸೇರಿದ ಶಿವಾನಿ ಗ್ರೀನ್ ಲೇಔಟ್ ನಲ್ಲಿರುವ 3 ಅಂತಸ್ತಿನ ಕಟ್ಟಡದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ.
ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ವುಡ್ ವರ್ಕ್ಸ್ ಕೆಲಸ ಮಾಡಲಾಗುತ್ತಿತ್ತು. ಮರ ಫಾಲೀಷ್ ಮಾಡಲು ಥಿನ್ನರ್ ಬಳಕೆ ಮಾಡಲಾಗಿದೆ. ಕೆಮಿಕಲ್ ಕೂಡ ಸಮೀದಲ್ಲೇ ಶೇಕರಣೆ ಮಾಡಲಾಗಿತ್ತು. ಈ ವೇಳೆ ನಿರ್ಮಾಣ ಹಂತದ ಕಟ್ಟಡದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Key words: Fire, construction, building, Two workers, die