ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಫೈರಿಂಗ್ ಮಾಡಿದ ಮಾಜಿ ಎಂಎಲ್​ಸಿ ಸಂಬಂಧಿ

ಚಿಕ್ಕಬಳ್ಳಾಪುರ, ಏಪ್ರಿಲ್ ,23,2025 (www.justkannada.in):  ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್​ಸಿ ವೈ.ಎ.ನಾರಾಯಣಸ್ವಾಮಿ  ಸಂಬಂಧಿಯೊಬ್ಬರು ಗುಂಡಿನ ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಮಾಜಿ ಎಂಎಲ್​ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಸಕಲೇಶಕುಮಾರ್ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡು ತಗುಲಿ ಚಿಕನ್ ರವಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಲ್ಲು ಕ್ವಾರಿ ಕ್ರಷರ್ ​ಗೆ ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದರು. ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಾಜಿ ಎಂಎಲ್​ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಸಕಲೇಶಕುಮಾರ್ ಪ್ರತಿಭಟಿಸುತ್ತಿದ್ದವರ ಮೇಲೆ  ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಗುಂಡಿನ ದಾಳಿಯಿಂದ ಗಾಯಗೊಂಡ ರವಿ ಎಂಬುವವರನ್ನ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Key words: Former MLC,  relative, fires, protesters