ಬೆಂಗಳೂರು,ಅಕ್ಟೋಬರ್,15,2020(www.justkannada.in) : ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ನಿಯಮ ಉಲ್ಲಂಘನೆ ಮಾಡಿದ್ದರಿಂದ ಅವರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಇದಕ್ಕೆ ರಾಜಕೀಯ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ಕೊರೊನಾ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸುವ ವೇಳೆ ಮೂರು ಜನರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ, ಕಾಂಗ್ರೆಸ್ ನವರು ಈ ನಿಯಮ ಗಾಳಿಗೆ ತೂರಿ, ಕಾನೂನು ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ, ಕುಸುಮಾ ವಿರುದ್ಧ ಕೇಸ್ ದಾಖಲಾಗಿದೆ. ಇದಕ್ಕೆ ರಾಜಕೀಯ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದಿದ್ದಾರೆ.
ಕಾಂಗ್ರೆಸ್ ನವರು ಎಷ್ಟರ ಮಟ್ಟಿಗೆ ಪಾರದರ್ಶಕವಾಗಿ ಚುನಾವಣೆ ಎದುರಿಸಿದ್ದಾರೆ
ಕಾಂಗ್ರೆಸ್ ಕಾರ್ಯಕರ್ತರನ್ನು ಹೆದರಿಸುವ ನಿಟ್ಟಿನಲ್ಲಿ ಈ ರೀತಿ ಕೇಸ್ ದಾಖಲಿಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ .ಶಿವಕುಮಾರ್ ಆರೋಪಿಸಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಇದ್ದಾಗ ಕಾನೂನಾತ್ಮಕವಾಗಿ ಹೇಗೆ ನಡೆದುಕೊಂಡಿದ್ದಾರೆ. ಎಷ್ಟರ ಮಟ್ಟಿಗೆ ಪಾರದರ್ಶಕವಾಗಿ ಚುನಾವಣೆ ಎದುರಿಸಿದ್ದಾರೆ. ಕಾರ್ಯಕರ್ತರನ್ನು ಹೇಗೆ ಹೆದರಿಸಿದ್ದರು ಎಂಬುದನ್ನು ಅವರೇ ಅವಲೋಕಿಸಿದರೆ ಗೊತ್ತಾಗುತ್ತದೆ ಎಂದು ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
key words : FIR-political-sense-against-kusuma-H.D.Kumaraswamy