ಮೈಸೂರು,ಮೇ,7,2022(www.justkannada.in): ನಗರದ ಬಂಡಿಪಾಳ್ಯದ ಎ.ಪಿ.ಎಂ.ಸಿ. ತರಕಾರಿ ಮಾರುಕಟ್ಟೆಯಲ್ಲಿ ತರಕಾರಿ ವ್ಯಾಪಾರಿಯನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದ ಐವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
ಮೈಸೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಬಂಡಿಪಾಳ್ಯದ ಎ.ಪಿ.ಎಂ.ಸಿ. ತರಕಾರಿ ಮಾರುಕಟ್ಟೆಯ ಸ್ಟಾಲ್ ನಂ. 8 ರಲ್ಲಿ ತರಕಾರಿ ವ್ಯಾಪಾರದ ದಲ್ಲಾಳಿಯಾಗಿದ್ದವರನ್ನ ಮೇ3 ರಂದು ಸಂಜೆ 5.30 ಗಂಟೆಯ ಸಮಯದಲ್ಲಿ ಆರೋಪಿಗಳು ಲಾಂಗ್ ಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಬಗ್ಗೆ ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಲ್ಲಿ ಆರೋಪಿಗಳ ಪತ್ತೆ ಬಗ್ಗೆ ಮೈಸೂರು ಜಿಲ್ಲೆ ಪೊಲೀಸ್ ಅಧೀಕ್ಷಕ ಆರ್. ಚೇತನ್.ಅವರ ಸೂಚನೆಯಂತೆ ಹಾಗೂ ಅಪರ ಪೊಲೀಸ್ ಅಧೀಕ್ಷಕ ಆರ್.ಶಿವಕುಮಾರ್ ಅವರ ಮತ್ತು ಮೈಸೂರು ಗ್ರಾಮಾಂತರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಡಾ.ಎ.ಆರ್ ಸುಮಿತ್ ಮಾರ್ಗದರ್ಶನದಂತೆ, ಮೈಸೂರು ದಕ್ಷಿಣ ಠಾಣೆಯ ಪೊಲೀಸ್ ನಿರೀಕ್ಷಕ.ಶಶಿಕುಮಾರ್.ವಿ.ಎಸ್ ರವರನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತಂಡ ಐದು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದ ಪೊಲೀಸ್ ನಿರೀಕ್ಷಕ.ಶಶಿಕುಮಾರ್.ವಿ.ಎಸ್ ಪಿ.ಎಸ್.ಐ ಶ್ರೀಕಂಪಣ್ಣ, ಪೊಲೀಸ್ ಸಿಬ್ಬಂದಿಗಳ ಕಾರ್ಯವನ್ನ ಮೈಸೂರು ಜಿಲ್ಲೆ ಪೊಲೀಸ್ ಅಧೀಕ್ಷಕ ಆರ್. ಚೇತನ್ ಶ್ಲಾಘಿಸಿದ್ದಾರೆ.
Key words: five -accused –arrest- Mysore -murder case