ನಿಂತಿದ್ದ ಲಾರಿಗೆ  ಟಿಟಿ ವಾಹನ ಡಿಕ್ಕಿಯಾಗಿ ಐವರು ಸಾವು

ಕಲಬುರ್ಗಿ,ಏಪ್ರಿಲ್,5,2025 (www.justkannada.in): ಪಂಚರ್ ಆಗಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಹಿಂದಿನಿಂದ ಟಿಟಿ ವಾಹನ ಡಿಕ್ಕಿ ಹೊಡೆದು ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ  ಜಿಲ್ಲೆ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಡೆದಿದೆ.

ಈ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರು ಬಾಗಲಕೋಟೆಯವರು ಎನ್ನಲಾಗಿದೆ. ಬಾಗಲಕೋಟೆಯಿಂದ ಕಲಬುರಗಿಯ ದರ್ಗಾಕ್ಕೆ 15 ಕ್ಕೂ ಹೆಚ್ಚು ಜನರು ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು.  ಈ ಮಧ್ಯೆ ನೆಲೋಗಿ ಕ್ರಾಸ್ ಬಳಿ ಪಂಚರ್ ಆಗಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಹಿಂದಿನಿಂದ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದಿದ್ದು ಪರಿಣಾಮ, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೇ ಇನ್ನೊಬ್ಬರು ಕಲಬುರಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ ಹಲವರನ್ನು ಕಲಬುರಗಿ ಹಾಗೂ ಜೇವರ್ಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. . ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಾಗಲಕೋಟೆಯಿಂದ ಕಲಬುರಗಿಯ ಖಾಜಾ ಬಂದೇನವಾಜ್ ದರ್ಗಾಕ್ಕೆ ಭಕ್ತರು ಆಗಮಿಸುತ್ತಿದ್ದರು.  ಘಟನಾ ಸ್ಥಳಕ್ಕೆ ಜೇವರ್ಗಿ ಹಾಗೂ ನೆಲೋಗಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Five death, TT vehicle, collides, lorry