ನವದೆಹಲಿ,ಜೂನ್,9,2022(www.justkannada.in): ಭಾರತದ ಮುಂದಿನ ರಾಷ್ಟ್ರಪತಿ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ದಿನಾಂಕ ನಿಗದಿ ಮಾಡಿದ್ದು, ಜುಲೈ 18ರಂದು ಮತದಾನ ನಡೆಯಲಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಜುಲೈ 24 ರಂದು ಕೊನೆಗೊಳ್ಳಲಿದ್ದು, ಸಂವಿಧಾನದ 62 ನೇ ವಿಧಿಯ ಪ್ರಕಾರ, ಮುಂದಿನ ರಾಷ್ಟ್ರಪತಿಯನ್ನು ಆ ಹೊತ್ತಿಗೆ ಆಯ್ಕೆ ಮಾಡಬೇಕಾಗಿದೆ.
ಜುಲೈ 18 ರಂದು ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಜುಲೈ 21 ರಂದು ಫಲಿತಾಂಶ ಪ್ರಕಟವಾಗಲಿದೆ. ಜೂನ್ 16 ರಿಂದ ಅಧಿಸೂಚನೆ ಪ್ರಕಟವಾಗಲಿದ್ದು ಜೂನ್ 29ಕ್ಕೆ ನಾಮಪತ್ರ ಸಲ್ಲಿಸಲು ಕಡೇ ದಿನವಾಗಿದೆ. ಜುಲೈ 2 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.
Key words: Fix –presidential- election- date –election commission