ಬೆಂಗಳೂರು, ಆಗಸ್ಟ್ 08, 2019 (www.justkannada.in): ರಾಜ್ಯದಲ್ಲಿ ಹದಿನಾರು ಜಿಲ್ಲೆಗಳ 80 ತಾಲೂಕುಗಳು ಪ್ರವಾಹಪೀಡಿತವಾಗಿದೆ. ಭಾರಿ ಮಳೆ, ಪ್ರವಾಹ, ಭೂ ಕುಸಿತದಿಂದಾಗಿ ಈವರೆಗೆ 24 ಮಂದಿ ಮೃತಪಟ್ಟಿದ್ದಾರೆ ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಹಿತಿ ನೀಡಿದರು.
ಮಳೆಯಿಂದಾಗಿ 6 ಸಾವಿರ ಕೋಟಿ ರೂ. ನಷ್ಟವಾಗಿದೆ. 12,651 ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ. 3 ,22 ,448 ಎಕ್ಟೇರ್ ಕೃಷಿ ಪ್ರದೇಶದಲ್ಲಿ ಬೆಳೆ ಹಾನಿ, ಆಸ್ತಿ ಪಾಸ್ತಿ ನಷ್ಟ ಸಂಭವಿಸಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
45 ವರ್ಷಗಳಲ್ಲಿ ಇದೇ ಮೊದಲ ಬಾರಿ ರಾಜ್ಯದಲ್ಲಿ ಇಂತಹ ದುರಂತ ಸಂಭವಿಸಿದೆ. ಸಂಕಷ್ಟಕ್ಕೆ ಸಿಲುಕಿರುವ 2.35 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ 624 ಪರಿಹಾರ ಕೇಂದ್ರ ಗಳ ತೆರೆಯಲಾಗಿದೆ. ಅಲ್ಲಿ 1.57 ಮಂದಿ ಆಶ್ರಯ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.