ಮೈಸೂರು,ಅ,5,2019(www.justkannada.in): ನೆರೆಯಿಂದ ತತ್ತರಿಸಿರುವ ರಾಜ್ಯದ ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ಕೊಡಿಸಲು ವಿಫಲವಾದ ಬಿಜೆಪಿ ಸಂಸದರು ರಾಜೀನಾಮೆ ನೀಡುವಂತೆ ಆಗ್ರಹಿಸಿ ಮೈಸೂರು ಮತ್ತು ಚಾಮರಾಜನಗರದಲ್ಲಿ ಬಿಎಸ್ ಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮೈಸೂರಿನಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಎಸ್ ಪಿ ಜಿಲ್ಲಾಧ್ಯಕ್ಷ ಚೈತ್ಯಭೂಮಿ ಪುಟ್ಟಸ್ವಾಮಿ ನೇತೃತ್ವದಲ್ಲಿ ಜಮಾಯಿಸಿದ ಬಿಎಸ್ ಪಿ ಕಾರ್ಯಕರ್ತರು, ಕರ್ನಾಟಕದಲ್ಲಿ ಉಂಟಾದ ನೆರೆಯಿಂದ ಸಾಕಷ್ಟು ನಷ್ಟ ಆಗಿದೆ. ಸರ್ಕಾರ ಅಂದಾಜಿನ ಪ್ರಕಾರ 38 ಸಾವಿರ ಕೋಟಿಗೂ ಹೆಚ್ಚು ಆಸ್ತಿಪಾಸ್ತಿ ನಷ್ಟವಾಗಿದೆ. ಆದ್ರೆ ಕೆಂದ್ರ ಈಗ ಕೇವಲ 1200 ಕೋಟಿ ನೀಡಿದೆ.. ಜನರಿಂದ ಆಯ್ಕೆಯಾದ ಎಂಪಿಗಳು ಕೇಂದ್ರದಿಂದ ಸೂಕ್ತ ಪರಿಹಾರ ತರುವಲ್ಲಿ ವಿಫಲಾಗಿದ್ದಾರೆ. ಹೀಗಾಗಿ ನೈತಿಕ ಹೊಣೆ ಹೊತ್ತು ರಾಜ್ಯ ಬಿಜೆಪಿ ಸಂಸದರು ರಾಜೀನಾಮೆ ನೀಡಬೇಕು ಮತ್ತು ರಾಜ್ಯ ಸರ್ಕಾರವನ್ನು ವಜಾ ಗೊಳಿಸುವಂತೆ ಆಗ್ರಹಿಸಿದರು.
ಚಾಮರಾಜನಗರದಲ್ಲಿ ಬಿಎಸ್ಪಿ ಕಾರ್ಯಕರ್ತರಿಂದ ಪ್ರತಿಭಟನೆ…
ಪ್ರವಾಹ ಸಂತ್ರಸ್ತರಿಗೆ ಕೇಂದ್ರ ಸರ್ಕಾರದಿಂದ ನೆರವು ಕೊಡಿಸಲು ಅಸಮರ್ಥರಾಗಿರುವ ಬಿಜೆಪಿ ಸಂಸದರ ರಾಜೀನಾಮೆ ಮತ್ತು ರಾಜ್ಯಸರ್ಕಾರ ವನ್ನು ವಜಾಗೊಳಿಸಲು ಆಗ್ರಹಿಸಿ ಬಿಎಸ್ಪಿ ಕಾರ್ಯಕರ್ತರು ಇಂದು ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಶ್ರೀಚಾಮರಾಜೇಶ್ವರ ಸ್ವಾಮಿ ದೇವಸ್ಥಾನದ ಎದುರು ಜಮಾಯಿಸಿದ ಬಿಎಸ್ ಪಿ ಕಾರ್ಯಕರ್ತರು ರಾಜ್ಯ ಬಿಜೆಪಿ ಸಂಸದರು ಹಾಗೂ ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.
ರಾಜ್ಯದಿಂದ 25 ಸಂಸದರನ್ನು ಕಳುಹಿಸಿಕೊಟ್ಟಿದ್ದರೂ ಸಹ ಕೇಂದ್ರ ಸರ್ಕಾರ ನೆರೆ ಸಂತ್ರಸ್ತರ ಪರಿಹಾರ ವಿಷಯದಲ್ಲಿ ವಂಚಿಸುತ್ತಿದೆ. ಜೊತೆಗೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಭಯದಲ್ಲಿ ಆಡಳಿತ ನಡೆಸಿ ಜನರನ್ನು ವಂಚಿಸುತ್ತಿದೆ. ಹೀಗಾಗಿ ಅಸಮರ್ಥ ಸಂಸದರು ರಾಜೀಮೆಕೊಟ್ಟು ಮ ನೆಗೆ ಹೋಗಲಿ ಹಾಗೂ ರಾ ಜ್ಯ ಸರ್ಕಾರವನ್ನು ರಾಷ್ಟ್ರಪತಿ ಗಳು ವಜಾಗೊಳಿಸಲಿ ಎಂದು ಬಿಎಸ್ಪಿ ಕಾರ್ಯಕರ್ತರು ಆಗ್ರಹಿಸಿದರು.
Key words: flood relief- bsp-Protest – Mysore – Chamarajanagar –demanding- resignation