ಪ್ರವಾಹ ಪೀಡಿತ ಪ್ರದೇಶಗಳಿಗೆ ಪಿಕ್ ‌ನಿಕ್‌ ಗೆ ಬಂದಂತೆ ಬಂದು ಹೋಗಿದ್ದಾರೆ : ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ 

ಬೆಂಗಳೂರು,ಅಕ್ಟೋಬರ್,26,2020(www.justkannada.in) : ಕಂದಾಯ ಸಚಿವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಪಿಕ್‌ನಿಕ್‌ಗೆ ಬಂದಂತೆ ಬಂದು ಹೋಗಿದ್ದಾರೆ. ಯಡಿಯೂರಪ್ಪ ಅವರು ವೈಮಾನಿಕ ಸಮೀಕ್ಷೆ ಮಾಡಿದ್ರು ಅವರಿಗೆ ಪ್ರವಾಹದ ಹಾನಿ ಎಷ್ಟು ಕಂಡಿದ್ಯೋ ಬಿಟ್ಟಿದ್ಯೋ ಅವರಿಗೆ ಗೊತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಕಿಡಿಕಾರಿದ್ದಾರೆ.jk-logo-justkannada-logo

ಮನೆ ಕುಸಿತ, ಜಾನುವಾರು ಸಾವು, ಆಸ್ತಿ ಹಾನಿ ಒಟ್ಟು ಅಂದಾಜು ರೂ.2ಸಾವಿರ ಕೋಟಿ ನಷ್ಟ

ನಿನ್ನೆ ಬೀದರ್ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದೆ, ಅಲ್ಲಿ ಸುಮಾರು ಎರಡೂವರೆ ಲಕ್ಷ ಹೆಕ್ಟೇರ್‌ನಲ್ಲಿ ಬೆಳೆದ ಬೆಳೆ ನಾಶವಾಗಿದೆ. ಮನೆ ಕುಸಿತ, ಜಾನುವಾರುಗಳ ಸಾವು, ಆಸ್ತಿ ಹಾನಿ ಹೀಗೆ ಒಟ್ಟು ಅಂದಾಜು ರೂ.2,000 ಕೋಟಿ ನಷ್ಟ ಸಂಭವಿಸಿದೆ. ಸ್ಥಳೀಯ ಜನಪ್ರತಿನಿಧಿಗಳ ಜೊತೆ ಸಭೆ ಮಾಡಿದ್ರೆ ವಾಸ್ತವ ಪರಿಸ್ಥಿತಿ ಸಿಎಂ ಅವರಿಗೆ ಅರಿವಾಗಿರೋದು, ಅದನ್ನೇ ಸರ್ಕಾರ ಮಾಡಿಲ್ಲ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಜನರ ಪಾಲಿಗೆ ಸರ್ಕಾರ ಸತ್ತಿದೆ

ಜನಪ್ರತಿನಿಧಿಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಮನವಿ ನೀಡಬೇಕು ಅಂತ ಕಾಯುತ್ತಾ ಇದ್ದರೆ ಯಡಿಯೂರಪ್ಪ ಅವರು ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಬೇರೆ ಯಾರಿಗೂ ಸಿಗದೆ ವಾಪಾಸು ಹೋಗಿದ್ದಾರೆ. ಜನರ ಕಷ್ಟ ಕೇಳೋಕೆ ಸರ್ಕಾರದ ಪ್ರತಿನಿಧಿಗಳು ಯಾರೂ ಜನರ ಬಳಿ ಹೋಗ್ತಿಲ್ಲ. ಅಂದರೆ ಜನರ ಪಾಲಿಗೆ ಸರ್ಕಾರ ಸತ್ತಿದೆ ಅಂತಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಪ್ರವಾಹ, ಕೊರೊನಾದಿಂದ ಜನರಿಗೆ ಸಾಕಷ್ಟು ಸಾವು, ನೋವುflood-prone-areas-picnic-Come-go-Former CM Siddaramaiah-barrageಕಲಬುರ್ಗಿ ಜಿಲ್ಲೆ ಆಗಸ್ಟ್‌ನಿಂದ ಈವರೆಗೆ ಮೂರು ಬಾರಿ ಪ್ರವಾಹದಿಂದ ಹಾನಿಗೊಳಗಾಗಿದೆ, ಇದರ ಜೊತೆಗೆ ಕೊರೊನಾದಿಂದ ಜನರು ಸಾಕಷ್ಟು ಕಷ್ಟ ಅನುಭವಿಸಿದ್ದಾರೆ. ಇಂತಹ ಕಷ್ಟಕಾಲದಲ್ಲಿ ರೈತರು, ಬಡವರ ಜೊತೆಗಿದ್ದು, ಅವರಿಗೆ ಸಾಂತ್ವನ ಹೇಳಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವರು ಇತ್ತ ಕಡೆ ತಲೆ ಹಾಕಿಲ್ಲ ಎಂದು ಟೀಕಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಾಳಜಿಯಿಲ್ಲ, ಅಧಿಕಾರಿಗಳು ಎಷ್ಟರ ಮಟ್ಟಿಗೆ ಸ್ಪಂದಿಸಬಹುದು

ಕಲಬುರ್ಗಿ ಜಿಲ್ಲೆಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ವೀಕ್ಷಿಸಿ, ಪರಿಹಾರ ಕಾರ್ಯಗಳಲ್ಲಿ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿ ನಂತರ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಜವಾಬ್ದಾರಿ ಹೊತ್ತ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಜನರ ಬಗ್ಗೆ ಕಾಳಜಿ ಇಲ್ಲ ಅಂತಾದ್ರೆ ಇನ್ನು ಅಧಿಕಾರಿಗಳು ಎಷ್ಟರ ಮಟ್ಟಿಗೆ ಸ್ಪಂದಿಸಬಹುದು ಎಂದು ಟ್ವೀಟ್ ಮೂಲಕ ಬೇಸರವ್ಯಕ್ತಪಡಿಸಿದ್ದಾರೆ.

key words : flood-prone-areas-picnic-Come-go-Former CM Siddaramaiah-barrage