ಹುಬ್ಬಳ್ಳಿ,ಡಿಸೆಂಬರ್,29,2021(www.justkannada.in): ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಡಿಸೆಂಬರ್ 31 ರಂದು ಬಂದ್ ಗೆ ಕರೆ ನೀಡಲಾಗಿದ್ದು ಈ ನಡುವೆ ಒತ್ತಾಯಪೂರ್ವಕವಾಗಿ ಬಂದ್ ಮಾಡಿದರೇ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಕೊರೋನಾದಿಂದ ವ್ಯಾಪಾರಸ್ಥರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಬಂದ್ ಮಾಡಬಾರದು. ಬಂದ್ ಗೆ ಕರೆ ನೀಡಿದವರು ಹತ್ತಾರು ಬಾರಿ ಯೋಚನೆ ಮಾಡಬೇಕಿತ್ತು. ಒತ್ತಾಯಪೂರ್ವಕವಾಗಿ ಬಂದ್ ಮಾಡಿದರೇ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಎಂಇಎಸ್ ನಿಷೇಧಿಸುವ ಕುರಿತು ಸರಕಾರ ಸಮಾಲೋಚನೆ ನಡೆಸುತ್ತಿದೆ. ಇಂದೇ, ನಾಳೆಯೇ ಆಗಬೇಕೆಂದರೆ ಆಗೋದಿಲ್ಲ. ಮಹಾರಾಷ್ಟ್ರ ಸರಕಾರದೊಂದಿಗೆ ಸರಕಾರ ಮಾತುಕತೆ ಮಾಡುತ್ತಿದೆ. ಯಾವುದೇ ಕಾರಕ್ಕೂ ಬಲವಂತದಿಂದ ಬಂದ್ ಮಾಡುವುದು ಸರಿಯಲ್ಲ. ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆಯನ್ನು ಜನರೇ ತಿರಸ್ಕರಿಸಿದ್ದಾರೆ. ಜನರು ಸಂಕಷ್ಟದಲ್ಲಿರುವ ಕಾರಣ ಕನ್ನಡಪರ ಹೋರಾಟಗಾರರು ಬಂದ್ ಕೈಬಿಡಬೇಕು ಎಂದು ಅರಗ ಜ್ಞಾನೇಂದ್ರ ಮನವಿ ಮಾಡಿದರು.
Key words: Forced- bandh – tough action-Home Minister-Araga Jnanendra-warns.