ಬೆಳಗಾವಿ,ಡಿಸೆಂಬರ್,20,2022(www.justkannada.in): ಹೊಸ ಪಿಂಚಣಿ ವ್ಯವಸ್ಥೆಯನ್ನು (ಎನ್‌ಪಿಎಸ್) ರದ್ದುಗೊಳಿಸಿ ಹಳೆಯ ಪಿಂಚಣಿ ಪದ್ಧತಿ (ಒಪಿಎಸ್) ಜಾರಿಗೆ ಆಗ್ರಹಿಸಿ ರಾಜ್ಯದಲ್ಲಿ ನೌಕರರು ಅನಿರ್ದಿಷ್ಟಾವಧಿ ಧರಣಿ ಕೈಗೊಂಡಿದ್ದಾರೆ.
ಈ ನಡುವೆ ಈ ವಿಚಾರ ಇಂದು ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪವಾಗಿದ್ದು, ಶಾಸಕರು ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿದರು. ಈ ಕುರಿತು ಸದನದಲ್ಲಿ ಉತ್ತರ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಎನ್ ಪಿಡಿ 2004 ಯೋಜನೆ ಜಾರಿಗೆ ಬಂದಿದೆ. ಹಳೆ ಪಿಂಚಿಣಿ ಯೋಜನೆಯನ್ನೇ ಜಾರಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಾಧಕ ಬಾಧಕ ಬಗ್ಗೆ ಚರ್ಚೆ ಮಾಡಬೇಕು ಏಕಪಕ್ಷೀಯವಾಗು ನಿರ್ಧಾರ ತೆಗೆದುಕೊಳ್ಳಲು ಆಗಲ್ಲ ಎಂದರು.
ಇಡೀ ರಾಜ್ಯದ ಜನರ ಶ್ರಮದಿಂದ ಬೊಕ್ಕಸಕ್ಕೆ ಹಣ ಬರುತ್ತದೆ ರಾಜ್ಯ ಸರ್ಕಾರಿ ನೌಕರರಿಗೆ ಹಲವು ಸೌಲಭ್ಯಗಳನ್ನ ನೀಡಿದ್ಧೇವೆ. ಒಪಿಎಸ್ ಮತ್ತು ಎನ್ ಪಿಎಸ್ ಸಾಧಕ ಬಾಧಕ ಕುರಿತು ಚರ್ಚೆ ಮಾಡಬೇಕು. ಸಾರ್ವಜನಿಕ ವಲಯದಲ್ಲಿ ಇದರ ಪರಿಣಾಮ ಹೇಗೆ ಎಂಬ ಬಗ್ಗೆ ಚರ್ಚೆ ಮಾಡಿ ಅಭಿಪ್ರಾಯ ಪಡೆಯುವಂತೆ ಸ್ಪೀಕರ್ ಗೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು. ಈ ಬಗ್ಗೆ ಚರ್ಚೆಗೆ ಮುಕ್ತ ಅವಕಾಶ ನೀಡುವುದಾಗಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭರವಸೆ ನೀಡಿದರು.
Key words: Forced- implement – old pension scheme-CM Basavaraj Bommai