ಮೈಸೂರು,ಜೂನ್,30,2022(www.justkannada.in): ಇಂದು ಮುಂಜಾನೆಯೇ ಮೈಸೂರು ಮೃಗಾಲಯಕ್ಕೆ ಅರಣ್ಯ ಸಚಿವ ಉಮೇಶ್ ಕತ್ತಿ ಭೇಟಿ ನೀಡಿ ಮೃಗಾಲಯ ವೀಕ್ಷಿಸಿದರು.
ನಿರ್ಮಾಣ ಹಂತದಲ್ಲಿರುವ ಗೊರಿಲ್ಲಾ ಗ್ಯಾಲರಿ , ಮೃಗಾಲಯದ ಉಗ್ರಾಣ, ಪಾಕಶಾಲೆ, ಆಸ್ಪತ್ರೆಯನ್ನ ವೀಕ್ಷಣೆ ಮಾಡಿದ ಸಚಿವ ಉಮೇಶ್ ಕತ್ತಿ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು. ಬಳಿಕ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವ ಉಮೇಶ್ ಕತ್ತಿ ಸಭೆ ನಡೆಸಲಿದ್ದಾರೆ.
ಈ ವೇಳೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಮಹದೇವಸ್ವಾಮಿ, ಸದಸ್ಯರುಗಳಾದ ಗೋಕುಲ್ ಗೋವರ್ಧನ್, ಮೃಗಲಯದ ನಿರ್ದೇಶಕ ಅಜಿತ್ ಕುಲಕರ್ಣಿ ಸೇರಿದಂತೆ ಹಲವರ ಭಾಗಿಯಾಗಿದ್ದರು.
ಮೃಗಾಲಯ ವೀಕ್ಷಣೆಯ ಬಳಿ ಕ ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಉಮೇಶ್ ಕತ್ತಿ, ರಾಜ್ಯದ ಪ್ರವಾಸೋದ್ಯಮದ ಅಭಿವೃದ್ಧಿ ಹಿನ್ನೆಲೆ ಮೃಗಾಲಯಕ್ಕೆ ಪ್ರೋತ್ಸಾಹ ನೀಡಲಾಗುತ್ತದೆ. ಇಳಕಲ್ ಡ್ಯಾಂ ಬಳಿ ನೂತನ ಮೃಗಾಲಯ ತೆರೆಯಲು ಸರ್ಕಾರದ ಚಿಂತನೆ ನಡೆಸಿದೆ. ಈಗಾಗಲೇ ಅನುಮತಿಗಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. 100 ಎಕರೆ ವಿಸ್ತೀರ್ಣ ಪ್ರದೇಶದಲ್ಲಿ ಮೃಗಾಲಯ ನಿರ್ಮಾಣಕ್ಕೆ ಚಿಂತನೆ ನಡೆಸಿದ್ದೇವೆ.
ಈ ಮೃಗಾಲಯ ಆರಂಭವಾದರೆ ಪ್ರವಾಸೋದ್ಯಮ ಅಭಿವೃದ್ಧಿಯಾಗಲಿದೆ. ಪ್ರಾಣಿ ತಜ್ಞರ ಅಭಿಪ್ರಾಯ ಪಡೆದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೃಗಾಲಯ ತೆರೆಯಲು ಚಿಂತನೆ ನಡೆಸಲಾಗಿದೆ. ಮೈಸೂರು ಮೃಗಾಲಯದಂತೆ ಎಲ್ಲಾ ಮೃಗಾಲಯಗಳನ್ನು ಅಭಿವೃದ್ಧಿಪಡಿಸುವುದು ನಮ್ಮ ಉದ್ದೇಶ. ಇಂದಿನ ಯುವ ಜನತೆಗೆ ಪ್ರಾಣಿ ಪಕ್ಷಿಗಳನ್ನು ಪರಿಚಯಿಸುವ ದೃಷ್ಟಿಯಿಂದ ಮೃಗಾಲಯ ತೆರೆಯಲಾಗುತ್ತಿದೆ. ಇದು ಅರಣ್ಯ ಇಲಾಖೆಯ ಮುಖ್ಯ ಕಾರ್ಯಕ್ರಮ. ಎಂದರು.
Key words: Forest Minister-Umesh katti-visits- Mysore Zoo