ಬೆಂಗಳೂರು, ಸೆಪ್ಟೆಂಬರ್ 21,2024 (www.justkannada.in): ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿ ಆದೇಶ ಹೊರಡಿಸಿದೆ.
ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಲಾಗಿದೆ. ಜಾತಿ ನಿಂದನೆ, ಜೀವ ಬೆದರಿಕೆ ಎರಡು ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ ಶಾಸಕ ಮುನಿರತ್ನ ಅವರನ್ನ ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ನಿನ್ನೆ ಪೊಲೀಸರು ಮತ್ತೆ ಬಂಧಿಸಿದ್ದರು.
ಶಾಸಕ ಮುನಿರತ್ನಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಇದೀಗ ಪ್ರಕರಣಗಳ ತನಿಖೆಗೆ ಸರ್ಕಾರ ಎಸ್ ಐಟಿ ರಚನೆ ಮಾಡಿದೆ.
Key words: Formation, SIT, cases, against, MLA Munirathna