ಚಿರತೆ ಹಾವಳಿ ತಡೆಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆ- ಸಿಎಂ ಬಸವರಾಜ ಬೊಮ್ಮಾಯಿ.

ಮೈಸೂರು,ಜನವರಿ,27,2023(www.justkannada.in): ಮೈಸೂರಿನ ಟಿ. ನರಸೀಪುರ ತಾಲ್ಲೂಕಿನಲ್ಲಿ ಚಿರತೆ ದಾಳಿಗೆ ಬಾಲಕ ಮತ್ತು ವೃದ್ಧೆ ಮೃತಪಟ್ಟ ನಂತರ ಚಿರತೆ ಹಾವಳಿ ತಡೆಗೆ  ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುತ್ತಿದ್ದು ಈ ನಡುವೆ ಚಿರತೆ ಹಾವಳಿ ತಡೆಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕಾಡುಪ್ರಾಣಿಗಳು ಮತ್ತು ಮಾನವ ನಡುವಿನ ಸಂಘರ್ಷ ತಡೆಗೆ  ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಗ್ರಾಮಸ್ಥರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಕಾಡು ಪ್ರಾಣಿಗಳ ಹಾವಳಿ ಇರುವ ಕಡೆ ಜನರಲ್ಲಿ ಕಾಡಂಚಿನ ಪ್ರದೇಶದಲ್ಲಿ ಜನರಿಗೆ ಜಾಗೃತಿ ಮೂಡಿಸಲು ಸೂಚನೆ ನೀಡಿದ್ದೇವೆ ಎಂದರು.

ಸಚಿವ ಆರ್ ಅಶೋಕ್ ವಿರುದ್ಧ ಮಂಡ್ಯದಲ್ಲಿ ಭಿತ್ತಿಪತ್ರ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಅಶೋಕ್ ಮಂಡ್ಯ ಜಿಲ್ಲಾ ಉಸ್ತುವಾರಿ ಬಗ್ಗೆ ಯಾವುದೇ ವಿರೋಧವಿಲ್ಲ. ಯಾರೋ ನಾಲ್ಕು ಜನ ಮಾತನಾಡಿದ್ರೆ ಅದಕ್ಕೆ ತಲೆಕೆಡಿಸಿಕೊಳ್ಳಬೇಕಿಲ್ಲ. ಅಂತಹ ಹೇಳಿಕೆಗಳಿಗೆ ಹೆಚ್ಚು ಮಹತ್ವ ನೀಡುವ ಅಗತ್ಯವಿಲ್ಲ ಎಂದರು.

Key words: Formation -special -task force –prevent- leopard –CM- Basavaraja Bommai.