ನವದೆಹಲಿ,ಮಾರ್ಚ್,18,2025 (www.justkannada.in): ನಿನ್ನೆ ಆರ್ ಎಸ್ಎಸ್ ಬಗ್ಗೆ ಟೀಕಿಸಿದ್ದ ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿರುವ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಆರ್ ಎಸ್ ಎಸ್ ಬಗ್ಗೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರೇ ಹೊಗಳಿದ್ದಾರೆ ಎಂದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಆರ್ ಎಸ್ಎಸ್ ಬಗ್ಗಇಡೀ ನಾಡಿಗೆ ಗೊತ್ತು. ಇಂದಿರಾ ಗಾಂಧಿ ಆರ್ ಎಸ್ಎಸ್ ಬಗ್ಗೆ ಹೊಗಳಿದ್ದಾರೆ. ಸಿದ್ದರಾಮಯ್ಯ ಮೂಲ ಕಾಂಗ್ರೆಸ್ ನವರಲ್ಲ. ಕಾಂಗ್ರೆಸ್ ವಿರೋಧಿ ಬಣದಲ್ಲಿದ್ದವರು. ಕಾಂಗ್ರೆಸ್ ತೃಪ್ತಿ ಪಡಿಸಲು ಆರ್ ಎಸ್ ಎಸ್ ಬಗ್ಗೆ ಮಾತನಾಡುತ್ತಾರೆ ಎಂದು ಕುಟುಕಿದರು.
ಕಾಂಗ್ರೆಸ್ ಸರ್ಕಾರದಿಂದ ಹಿಂದುಳಿದ ವರ್ಗಕ್ಕೆ ಮೋಸ
ಮುಸ್ಲೀಮರಿಗೆ ಗುತ್ತಿಗೆಯಲ್ಲಿ 4% ಮೀಸಲಾತಿ ಕುರಿತು ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದಿಂದ ಹಿಂದುಳಿದ ವರ್ಗಕ್ಕೆ ಮೋಸವಾಗುತ್ತಿದೆ. ಅಲ್ಪಸಂಖ್ಯಾತರ ಗುತ್ತಿಗೆ ಮೀಸಲಾತಿ 2ಎ ಪಟ್ಟಿಯಲ್ಲಿದೆ. ಆದರೆ ಮತ ಬ್ಯಾಂಕ್ ಗಟ್ಟಿ ಮಾಡಿಕೊಳ್ಳುಲು ಈ ನಿರ್ಧಾರ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಇದಕ್ಕೆ ಬೆಲೆ ತೆರಬೇಕಾಗುತ್ತದೆ. ಸರಕಾರದ ನಡೆ ಸಂವಿಧಾನ ಬಾಹಿರ ಕಾನೂನು ಬಾಹಿರ. ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಿ ಸಮಾಜ ಒಡೆಯಲು ಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.
Key words: Indira Gandhi, praised, RSS, Former CM, Bommai