ಬೆಂಗಳೂರು,ಮೇ,24,2023(www.justkannada.in): ನಿಷ್ಪಕ್ಷಪಾತವಾಗಿ ತಾವು ಸದನವನ್ನು ನಡೆಸಬೇಕು. ವಿಪಕ್ಷ ಸದಸ್ಯರ ಹೇಳಿಕೆಗೆ ಸ್ಪೀಕರ್ ಹೆಚ್ಚು ಅವಕಾಶ ಕೊಡಬೇಕು. ಚರ್ಚೆ ವೇಳೆ ಕೊನೆಯ ಸಾಲಿನವರಿಗೆ ಹೆಚ್ಚು ಅವಕಾಶ ಕೊಡಬೇಕು ಎಂದು ನೂತನ ಸ್ಪೀಕರ್ ಯು.ಟಿ ಖಾದರ್ ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.
ನೂತನ ಸ್ಪೀಕರ್ ಯು.ಟಿ ಖಾದರ್ ಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕರ್ನಾಟಕದ ವಿಧಾನಮಂಡಲಕ್ಕೆ ತನ್ನದೇ ಆದ ಇತಿಹಾಸವಿದೆ. ಇಡೀ ದೇಶಕ್ಕೆ ಮಾರ್ಗದರ್ಶನ ನೀಡಿದ ವಿಧಾನಮಂಡಲವಿದು. ಯು.ಟಿ.ಖಾದರ್ ಶಾಸಕರಾಗಿ, ಸಚಿವರಾಗಿ ಕೆಲಸ ಮಾಡಿದ್ದಾರೆ. ಯು.ಟಿ.ಖಾದರ್ ವಿಪಕ್ಷ ಉಪನಾಯಕರಾಗಿಯೂ ಉತ್ತಮ ಕೆಲಸ ಮಾಡಿದ್ದಾರೆ.
ಈ ಹಿಂದೆ ಸ್ಪೀಕರ್ ಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ನ್ಯಾಯಾಂಗಕ್ಕಿಂತ ಎತ್ತರವಾದದ್ದು ಸ್ಪೀಕರ್ ಸ್ಥಾನ. ಸ್ಪೀಕರ್ ಹೊಸ ವಿಚಾರಕ್ಕೆ ಅವಕಾಶ ಮಾಡಿಕೊಡುವ ವಿಶ್ವಾಸವಿದೆ. ಎಲ್ಲರನ್ನೂ ಸಮಾನವಾಗಿ ತೆಗೆದುಕೊಂಡು ಹೋಗುವ ಶಕ್ತಿ ನಿಮ್ಮಲ್ಲಿದೆ ಎಂದರು.
Key words: Former CM- Bommai- congratulates – new Speaker- UT Khader.