ಬೆಂಗಳೂರು,ಜುಲೈ,31,2021(www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬದವರ ವಿರುದ್ಧ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಈ ಹಿಂದೆ ಅರ್ಜಿದಾರರು ಖಾಸಗಿ ದೂರು ಸಲ್ಲಿಸಿದ್ದ ಹಿನ್ನೆಲೆ, ಈಗಿನದನ್ನು ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬದವರ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣವನ್ನು ಸಿಬಿಐ ಅಥವಾ ಎಸ್‌ಐಟಿ ತನಿಖೆ ವಹಿಸಬೇಕೆಂದು ಕೋರಿ ಪಿಐಎಲ್ ಸಲ್ಲಿಸುವುದಕ್ಕೆ ಅವಕಾಶ ನೀಡಬೇಕೆಂದು ಹೈಕೋರ್ಟ್ನಲ್ಲಿ ಟಿ.ಜೆ.ಅಬ್ರಹಾಂ ಅರ್ಜಿ ಸಲ್ಲಿಸಿದ್ದರು.
ಆದರೆ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್, ಈ ಹಿಂದೆ ಅರ್ಜಿದಾರರು ಖಾಸಗಿ ದೂರು ಸಲ್ಲಿಸಿದ್ದ ಹಿನ್ನೆಲೆ ಈಗಿನದನ್ನು ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲವೆಂದು ಅರ್ಜಿಯನ್ನು ತಿರಸ್ಕರಿಸಿದೆ.
ಅರ್ಜಿ ಮಾರ್ಪಡಿಸಿ ಸಂಬಂಧಿಸಿದ ಪೀಠಕ್ಕೆ ವರ್ಗಾಯಿಸಲು ರಿಜಿಸ್ಟ್ರಾರ್ ಜನರಲ್ ರಿಗೆ ಹೈಕೋರ್ಟ್ ಸೂಚನೆ ನೀಡಿದೆ. ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಪೂರ್ವಾನುಮತಿ ನಿರಾಕರಣೆ ಹಿನ್ನೆಲೆ ಇತ್ತೀಚೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಲು ನಿರಾಕರಿಸಿತ್ತು. ಹೀಗಾಗಿ ಟಿ.ಜೆ.ಅಬ್ರಹಾಂ ಹೈಕೋರ್ಟ್ ಮೆಟ್ಟಿಲೇರಿದ್ದರು.
Key words: Former CM BS yeddyurappa- corruption-allegations – cannot – considered –PIL-High Court