ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಬಿಎಸ್ ವೈಗೆ ಮತ್ತೆ ಸಂಕಷ್ಟ: ವಿಚಾರಣೆಗೆ ಹಾಜರಾಗುವಂತೆ ಸಮನ್ಸ್

ಬೆಂಗಳೂರು,ಫೆಬ್ರವರಿ,28,2025 (www.justkannada.in): ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಬಿಎಸ್  ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು ಮಾರ್ಚ್ 15ರಂದು  ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿ  ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಆದೇಶಿಸಿದೆ.

ಬೆಂಗಳೂರಿನ 1 ನೇ ತ್ವರಿತಗತಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಬಿ.ಎಸ್ ಯಡಿಯೂರಪ್ಪ ಮತ್ತು ಇತರೆ ಆರೋಪಿಗಳಿಗೆ ಸಮನ್ಸ್ ನೀಡಿದೆ. ಸಹ ಆರೋಪಿಗಳಾದ ವೈಎಂ ಅರುಣ, ರುದ್ರೇಶ ,ಮರುಳಸಿದ್ದಯ್ಯ ಜಿ.ಮರಿಸ್ವಾಮಿಗೂ ಸಮನ್ಸ್ ಜಾರಿಗೆ ಕೋರ್ಟ್ ಆದೇಶ ಹೊರಡಿಸಿದೆ.

ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್ ಇತ್ತೀಚೆಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ್ದ ಹೈಕೋರ್ಟ್ ಯಡಿಯೂರಪ್ಪರನ್ನು ಬಂಧಿಸದಂತೆ ಸೂಚನೆ ನೀಡಿತ್ತು. ಬಳಿಕ ವಿಚಾರಣೆಯ ಖುದ್ದು ಹಾಜರಾತಿಗೆ ವಿನಾಯಿತಿ ನೀಡಲಾಗಿತ್ತು.

Key words: Former CM, BSY,POCSO case, Summoned