ಬೆಂಗಳೂರು,ಏಪ್ರಿಲ್,20,2021(www.justkannada.in): ಕೊರೋನಾ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹೆಚ್ಚಿರುವ ಸ್ಥಳಗಳಲ್ಲಿ 15 ದಿನಗಳ ಕಾಲ ಲಾಕ್ ಡೌನ್ ಮಾಡಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.
ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಕೈಗೊಳ್ಳಲಾಗುವ ಕ್ರಮಗಳ ಬಗ್ಗೆ ರಾಜ್ಯಪಾಲರ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯುತ್ತಿದೆ. ಸಭೆಯಲ್ಲಿ ಕೊರೋನಾ ಹೆಚ್ಚಳ ಮತ್ತು ನಿಯಂತ್ರಣ ಕುರಿತು ಸಚಿವ ಸುಧಾಕರ್ ಮಾಹಿತಿ ನೀಡಿದರು. ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಿದರು. ಕಳೆದ 2 ವಾರಗಳಿಂದ ಕೊರೋನಾ ಪ್ರಕರಣ ಹೆಚ್ಚಳವಾಗುತ್ತಿದೆ. 5200 ಆರೋಗ್ಯ ಸಿಬ್ಬಂದಿಯನ್ನ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿದ್ದೇವೆ. ಗಂಭೀರ ಪರಿಸ್ಥಿತಿ ಹಿನ್ನೆಲೆ ನೇಮಕ ಮಾಡಿದ್ದೇವೆ. ಆಕ್ಸಿಜನ್ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದೆ. ವಿವಿಧ ಹಂತಗಳಲ್ಲಿ ಬೆಡ್ ಮೀಸಲಿಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ರಾಜ್ಯದಲ್ಲಿ ಲಾಕ್ ಡೌನ್ ಮಾಡಿ. ಬೆಂಗಳೂರು ಸೇರಿ ಹೆಚ್ಚು ಕೇಸ್ ಗಳು ಬರುವ ಸ್ಥಳಗಳಲ್ಲಿ ತಕ್ಷಣವೇ ಲಾಕ್ ಡೌನ್ ಮಾಡಿ. ನೈಟ್ ಕರ್ಙಫ್ಯೂ ಜಾರಿ ಮಾಡುವುದರಿಂದ ಪ್ರಯೋಜನವಿಲ್ಲ. ಹೀಗಾಗಿ 15 ದಿನ ಲಾಕ್ ಡೌನ್ ಮಾಡಿ. ಬಡವರಿಗೆ ಒಂದು ತಿಂಗಳು ಆರ್ಥಿಕ ಸಹಾಯ ನೀಡಬೇಕು ಎಂದು ಸಲಹೆ ನೀಡಿದರು.
Key words: Former CM- HD Kumaraswamy – all-party meeting – lock down-advice