ರಾಜ್ಯದ ಎಲ್ಲಾ ಜನರಿಗೂ ಉಚಿತ ಲಸಿಕೆ ನೀಡುವಂತೆ ಮಾಜಿ ಸಿಎಂ ಹೆಚ್.ಡಿಕೆ ಆಗ್ರಹ..

ಬೆಂಗಳೂರು,ಏಪ್ರಿಲ್,24,2021(www.justkannada.in):  ಕೋವಿಡ್ ಸಂಕಷ್ಟದಲ್ಲಿ ಸಂದರ್ಭದಲ್ಲಿ ರಾಜ್ಯದಲ್ಲಿ ಎಲ್ಲಾ ಜನರಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡುವಂತೆ ರಾಜ್ಯಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.jk

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಮೇ ತಿಂಗಳ 1 ರಿಂದ ‌18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಕೇಂದ್ರ ಸರಕಾರ ತೆಗೆದುಕೊಂಡಿರುವ ತೀರ್ಮಾನದಂತೆ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಆರುವರೆ ಕೋಟಿ ಜನತೆಗೂ ಉಚಿತವಾಗಿ ಲಸಿಕೆಯನ್ನು ನೀಡುವ ಮೂಲಕ ನೆರವಿಗೆ ಧಾವಿಸಬೇಕೆಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

ಈಗಾಗಲೇ ಜಾರ್ಖಂಡ್, ಗೋವಾ, ಛತ್ತೀಸ್‌ಘಡ, ಉತ್ತರ ಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಕೇರಳ, ಬಿಹಾರ ಮತ್ತು ಸಿಕ್ಕಿಂನಲ್ಲಿ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಘೋಷಿಸಲಾಗಿದೆ. ಈಗ ಕರ್ನಾಟಕ ರಾಜ್ಯದಲ್ಲಿಯೂ ಸಹ ಇದೇ ಕ್ರಮ ಅನುಸರಿಸಬೇಕು‌ ಎಂದು ಮುಖ್ಯಮಂತ್ರಿ ಶ್ರೀ @BSYBJP ಅವರಲ್ಲಿ ‌ನನ್ನ ಕೋರಿಕೆ.

ಈಗಿನ ಸಂದರ್ಭದಲ್ಲಿ ಜನರು ಹಣ ಕೊಟ್ಟು ಲಸಿಕೆ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಸರಕಾರವೇ ಮುಂದೆ ಬಂದು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವ ತೀರ್ಮಾನವನ್ನು ಪ್ರಕಟಿಸಬೇಕು ಎಂದು ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಸುಮಾರು ಒಂದು ಕೋಟಿ ಡೋಸ್ ಲಸಿಕೆ ಕೊಳ್ಳಲು 400 ಕೋಟಿ ರೂ ಮೀಸಲಿಡಲಾಗಿದೆ. ಸರಿಸುಮಾರು ರೂ 2.50 ಲಕ್ಷ ಕೋಟಿ ಬಜೆಟ್ ಮಂಡನೆ ಮಾಡುವ ಸರಕಾರಕ್ಕೆ ಕನಿಷ್ಠ ಪಕ್ಷ ರೂ. 2 ಸಾವಿರ ಕೋಟಿ ಹಣವನ್ನು ಲಸಿಕೆ ಖರೀದಿ ಮಾಡಲು ಮೀಸಲಿಡುವುದರಿಂದ ಬೊಕ್ಕಸಕ್ಕೆ ಭಾರೀ ಹೊರೆಯಾಗದು. ಬಡವ-ಬಲ್ಲಿದನೆಂಬ ತಾರತಮ್ಯ ತೋರದೆ ರಾಜ್ಯದ ಎಲ್ಲಾ ಜನತೆಗೆ ಉಚಿತವಾಗಿ ಲಸಿಕೆ ನೀಡುವ ಮಹತ್ವದ ನಿರ್ಧಾರ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಈ ಮೂಲಕ ಆಗ್ರಹಿಸುತ್ತೇನೆ ಎಂದು ಟ್ವಿಟ್ಟರ್ ನಲ್ಲಿ ಹೆಚ್.ಡಿಕೆ ತಿಳಿಸಿದ್ದಾರೆ.Former CM- HD kumaraswamy- demands- free vaccine- all people - state.

ರಾಜ್ಯದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವಂತೆ ಒಂದುವರೆ ತಿಂಗಳ ಹಿಂದೆಯೇ ಸರ್ಕಾರಕ್ಕೆ ಸಲಹೆ ನೀಡಿದ್ದೆ. ಪಲ್ಸ್ ಪೋಲಿಯೋ ಲಸಿಕೆ ನೀಡಿದ ಮಾದರಿಯಲ್ಲಿ ಎಲ್ಲರಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡುವ ನಿರ್ಧಾರ ಕೈಗೊಂಡರೆ ಅದು ಅಭಿನಂದನಾರ್ಹ ಎಂದು ಹೆಚ್.ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

Key words: Former CM- HD kumaraswamy- demands- free vaccine- all people – state.