ಬೆಂಗಳೂರು,ಆಗಸ್ಟ್,31,2023(www.justkannada.in): ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಐಸಿಯುನಿಂದ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಾಜಿ ಸಿಎಂ ಹೆಚ್.ಡಿ .ಕುಮಾರಸ್ವಾಮಿ ಅವರು ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಐಸಿಯುನಿಂದ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ. ಮೂರು ದಿನಗಳ ಕಾಲ ವೈದ್ಯರು ವಾರ್ಡ್ನಲ್ಲೇ ನಿಗಾ ವಹಿಸಲಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ನಿನ್ನೆಯಿಂದ ICUನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ.
Key words: Former CM-HD Kumaraswamy- shift – ICU to ward.