ಬೆಂಗಳೂರು,ಮೇ,21,2024 (www.justkannada.in): ವಕೀಲ ದೇವರಾಜೇಗೌಡ ಅವರೊಂದಿಗೆ ಅರ್ಧ ನಿಮಿಷ ಮಾತನಾಡಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಒಪ್ಪಿಕೊಂಡ ಮೇಲೆ ಮುಖ್ಯಮಂತ್ರಿಗೆ ಬೇರೆ ಯಾವ ಸಾಕ್ಷಿ ಬೇಕು. ಮೊದಲು ಡಿಕೆ ಶಿವಕುಮಾರ್ ರಾಜೀನಾಮೆ ನೀಡಲಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದರು.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್ ರಕ್ಷಣೆಗೆ ಸಿಎಂ ಹಾಗೂ ಸರ್ಕಾರ ನಿಂತಿದೆ. ತಪ್ಪಿತಸ್ಥರಿಗೆ ಸರ್ಕಾರ ರಕ್ಷಣೆ ಕೊಡುತ್ತಿದೆ. ಸರ್ಕಾರ ಮುಂದೆ ದೊಡ್ಡ ಬೆಲೆ ತೆರಬೇಕಾಗುತ್ತದೆ. ಆಡಿಯೋ ರಿಲೀಸ್ ಆದಾಗಿನಿಂದ ಡಿಕೆ ಶಿವಕುಮಾರ್ ಮಾತಾನಾಡುತ್ತಿಲ್ಲ. ಈ ಬಗ್ಗೆ ನಾವು ಕಾನೂನು ವ್ಯಾಪ್ತಿಯಲ್ಲಿ ಹೋರಾಟ ಮಾಡುತ್ತೇವೆ ಎಂದರು.
ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗಬೇಕು. ತಪ್ಪಿತಸ್ಥರನ್ನು ರಕ್ಷಣೆ ಮಾಡಲು ನಾವು ಹೋಗಲ್ಲ. ಈ ವಿಷಯದಲ್ಲಿ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎಂಬುದನ್ನು ನಾವು ನೋಡುತ್ತಿದ್ದೇವೆ ಎಂದು ಹೆಚ್.ಡಿಕೆ ತಿಳಿಸಿದರು.
Key words: Former CM-HDK resignation – DCM- DK Shivakumar