ಜ.11 ರಂದು ಮಾಜಿ ಸಿಎಂ ದಿ. ಎಸ್.ಎಂ ಕೃಷ್ಣ ಅವರಿಗೆ ಶ್ರದ್ಧಾಂಜಲಿ ಸಭೆ

ಮೈಸೂರು,ಜನವರಿ,9,2025 (www.justkannada.in):  ಇತ್ತೀಚೆಗೆ ನಿಧನರಾದ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ  ಶ್ರದ್ಧಾಂಜಲಿ ಸಭೆಯನ್ನು ಜನವರಿ 11 ರಂದು ಆಯೋಜಿಸಲಾಗಿದೆ ಎಂದು  ಮಾಜಿ ಎಂಎಲ್ ಸಿ ಮರಿತಿಬ್ಬೇಗೌಡ ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮರಿತಿಬ್ಬೇಗೌಡ, ಜನವರಿ 11 ರಂದು ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನ ಚನ್ನಯ್ಯ ಸಭಾಂಗಣದಲ್ಲಿ ಮಾಜಿ ಸಿಎಂ ದಿವಂಗತ ಎಸ್ಎಂ ಕೃಷ್ಣ ಅವರ ಶ್ರದ್ಧಾಂಜಲಿ ಸಭೆ  ನಡೆಯಲಿದೆ. ಮೈಸೂರು ಮಹಾನಗರ ಮತ್ತು ಜಿಲ್ಲಾ ನಾಗರಿಕ ಸಮಿತಿ ಹಾಗೂ ಮಂಡ್ಯ ಜಿಲ್ಲಾ ಬಳಗ ವತಿಯಿಂದ ಕಾರ್ಯಕ್ರಮ ಜರುಗಲಿದ್ದು,  ಮಾಜಿ ಸಭಾಪತಿ ಬಿ.ಎಲ್ ಶಂಕರ್, ಕೋಟೆ ಶಿವಣ್ಣ, ನಿವೃತ್ತ ಪ್ರಾಧ್ಯಾಪಕ, ಡಾ.ಎಚ್ ಎಂ ರಾಜಶೇಖರ್, ಸೇರಿದಂತೆ ಹಲವು ಸಂಪನ್ಮೂಲ ವ್ಯಕ್ತಿಗಳು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ರಾಜ್ಯಕ್ಕೆ ಎಸ್.ಎಂ ಕೃಷ್ಣ ಅವರ ಕೊಡುಗೆ ಅಪಾರ.  ಅವರನ್ನ ಈ ಒಂದು ಸಂದರ್ಭದಲ್ಲಿ ನೆನಪು ಮಾಡಿಕೊಳ್ಳಬೇಕು ಎಂದು ಮಾಜಿ ಎಂಎಲ್ ಸಿ ಮರಿತಿಬ್ಬೇಗೌಡ ತಿಳಿಸಿದರು.

Key words: Tribute, former CM, S.M. Krishna, Jan. 11, mysore