ಬೆಂಗಳೂರು,ನ,7,2019(www.justkannada.in): ಮಾಜಿ ಸಚಿವ ಡಿ.ಕೆ ಶಿವಕುಮಾರ್ ದೇವಸ್ಥಾನಗಳಿಗೆ ಭೇಟಿ ನೀಡುವ ಸಲುವಾಗಿ ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಡಿಕೆಶಿ ಅವರ ಈ ಪ್ರವಾಸಕ್ಕೆ ಬಣ್ಣ ಹಚ್ಚುವುದು ಬೇಡ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಇಂದು ಈ ಬಗ್ಗೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಇಂದು ಮೈಸೂರು ಹಾಗೂ ಜಿಲ್ಲೆಯ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ. ಹಾಗೆಯೇ ಮೈಸೂರಿನ ಕಾಂಗ್ರೆಸ್ ಕಚೇರಿಗೂ ಭೇಟಿ ನೀಡಿದ್ದಾರೆ. ಈ ಪ್ರವಾಸದ ಕುರಿತು ಬಣ್ಣಹಚ್ಚಿವುದು ಬೇಡ ಎಂದು ತಿಳಿಸಿದರು.
ಅಪರೇಷನ್ ಕಮಲ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಡಿಯೋ ವಿಚಾರ ಚರ್ಚಿಸಿದ್ದೇವೆ. ರಾಷ್ಟ್ರಪತಿಗಳನ್ನು ಭೇಟಿಯಾಗಿ ಈ ಬಗ್ಗೆ ಮನವಿ ಮಾಡಲು ನಿರ್ಧಾರ ಮಾಡಿದ್ದೇವೆ. ಕೇಂದ್ರದ ಗೃಹ ಸಚಿವ ಅಮಿತ್ ಶಾ ಹಾಗೂ ಬಿ.ಎಸ್.ವೈ ಕುದುರೆ ವ್ಯಾಪರ ಮಾಡಿದ್ದಾರೆ. ಮೈತ್ರಿ ಸರ್ಕಾರವನ್ನ ಬೀಳಿಸಲು ಯತ್ನಿಸಿದ್ದಾರೆ. ಇನ್ನು ಕೆ.ಆರ್.ಪೇಟೆ ಅನರ್ಹ ಶಾಸಕ ನಾರಾಯಣಗೌಡ, ಯಡಿಯೂರಪ್ಪ ತಮಗೆ ಒಂದು ಸಾವಿರ ಕೋಟಿ ರೂಪಾಯಿ ಕೊಟ್ಟಿದ್ದರು ಎಂದು ಹೇಳಿಕೆ ನೀಡಿದ್ದಾರೆ. ಇದೇ ರೀತಿಯ ಹೇಳಿಕೆಯನ್ನು ಕೋಲಾರ ಶಾಸಕರು ನೀಡಿದ್ದರು. ಇದು ಸಂವಿಧಾನ ವಿರೋಧಿಯಾಗುತ್ತದೆ. ಇದನ್ನು ರಾಷ್ಟ್ರಪತಿಗಳಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಸಿದ್ಧರಾಮಯ್ಯ ತಿಳಿಸಿದರು.
Key words: former CM -Siddaramaiah -about -DK Shivakumar’s -tour – Mysore.