ಬೆಂಗಳೂರು,ಸೆಪ್ಟಂಬರ್,13,2021(www.justkannada.in): ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್ ಎತ್ತಿನಗಾಡಿ ಚಲೋ ನಡೆಸಿದ ಹಿನ್ನೆಲೆ ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ ಯುಪಿಎ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ನಾಯಕರು ಎತ್ತಿನಗಾಡಿಯಲ್ಲಿ ಬಂದು ಪ್ರತಿಭಟನೆ ಮಾಡಬೇಕಿತ್ತು ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.
ಸಿಎಂ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂಸತ್ ಭವನಕ್ಕೆ ವಾಜಪೇಯಿ ಎತ್ತಿನಗಾಡಿಯಲ್ಲಿ ಬಂದಿದ್ದರು ನಾವು ಬಂದರೆ ತಪ್ಪೆ? ಎಂದು ಪ್ರಶ್ನಿಸಿದ್ದಾರೆ.
ಬೆಲೆ ಏರಿಕೆ ವಿರೋಧಿಸಿ ಪಾರ್ಲಿಮೆಂಟ್ ಗೆ ವಾಜಪೇಯಿಯವರು ಎತ್ತಿನಗಾಡಿಯಲ್ಲಿ ಬಂದಿದ್ದರು. ಆದರೆ ನಾವು ವಿಧಾನಸೌಧಕ್ಕೆ ಎತ್ತಿನ ಗಾಡಿಯಲ್ಲಿ ಬಂದರೆ ತಪ್ಪಾ? ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆಯಾದಾಗ ಹಿಂದೆ ಶೋಭಾ ಕರಂದ್ಲಾಜೆ ತಲೆ ಮೇಲೆ ಸಿಲಿಂಡರ್ ಹೊತ್ತು ಪ್ರತಿಭಟನೆ ಮಾಡಿದ್ದರು. ಶೋಭಾ ಕರಂದ್ಲಾಜೆ ಈಗ ಎಲ್ಲಿಗೆ ಹೋಗಿದ್ದಾರೆ? ಎಂದು ಸಿದ್ಧರಾಮಯ್ಯ ಟಾಂಗ್ ನೀಡಿದರು.
ನಾನು ನಮ್ಮ ರಾಜ್ಯದ ಜನತೆಯ ಬಗ್ಗೆ ಕಾಳಜಿಯಿಂದ ಮಾತನಾಡುತ್ತಿದ್ದೇನೆ. ಪೆಟ್ರೋಲ್, ಡೀಸೆಲ್ ಮೇಲೆ ನಮ್ಮ ರಾಜ್ಯದಲ್ಲಿ ಹೆಚ್ಚು ತೆರಿಗೆ ವಸೂಲಿ ಮಾಡಲಾಗುತ್ತಿದೆ. ಅದನ್ನು ಮೊದಲು ಕಡಿಮೆ ಮಾಡಲಿ ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.
ಯುಪಿಎ ಸರ್ಕಾರದ ಅವಧಿಯಲ್ಲಿ ಕಚ್ಚಾ ತೈಲ ಬೆಲೆ 110 ಡಾಲರ್ ಮೇಲಿತ್ತು. ಆದರೂ ಕಡಿಮೆ ದರದಲ್ಲಿ ಪೆಟ್ರೋಲ್ ನೀಡಲಾಗುತ್ತಿತ್ತು. ಈಗ ಕಚ್ಚಾ ತೈಲ ಬೆಲೆ 70 ಡಾಲರ್ ಇದೆ. ಆದರೆ ಪೆಟ್ರೋಲ್ 100 ರೂ. ಗಡಿ ದಾಟಿದೆ. ಮನಮೋಹನ್ ಸಿಂಗ್ ಅವಧಿಯಲ್ಲಿ ಪ್ರತಿ ಲೀಟರ್ ಮೇಲೆ 3.45 ರೂ. ಮಾತ್ರ ತೆರಿಗೆ ವಿಧಿಸಲಾಗುತ್ತಿತ್ತು. ಈಗ 33 ರೂಗಳಷ್ಟು ಪ್ರತಿ ಲೀಟರ್ ಮೇಲೆ ತೆರೆಗೆ ವಿಧಸಲಾಗುತ್ತಿದೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟ ವಿವರಣೆ ನೀಡಲಿ ಸಿದ್ಧರಾಮಯ್ಯ ಆಗ್ರಹಿಸಿದರು.
Key words: former CM- Siddaramaiah -CM Bommai-statement – protest -UPA government.