ಬೆಂಗಳೂರು,ಜು, 23,2020(www.justkannada.in): ಕೊರೋನಾ ಕಿಟ್ ಖರೀದಿಯಲ್ಲಿ 2 ಸಾವಿರ ಕೋಟಿ ಅವ್ಯವಹಾರವಾಗಿದೆ. ರಾಜ್ಯ ಸರ್ಕಾರ 2 ಸಾವಿರ ಕೋಟಿ ಲೂಟಿ ಮಾಡಿದೆ ಎಂದು ಆರೋಪಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯಗೆ ಆರೋಗ್ಯ ಸಚಿವ ಶ್ರೀರಾಮುಲು ತಿರುಗೇಟು ನೀಡಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ಆರೋಗ್ಯ ಇಲಾಖೆಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಒಂದೇ ಒಂದು ರೂಪಾಯಿ ಅಕ್ರಮ ನಡೆದಿಲ್ಲ. ಕೊರೋನಾಗೆ ಆರೋಗ್ಯ ಇಲಾಖೆಯಲ್ಲಿ 290 ಕೋಟಿ ವೆಚ್ಚವಾಗಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರದ ವಿರುದ್ದ 2 ಸಾವಿರ ಕೋಟಿ ಭ್ರಷ್ಟಾಚಾರ ಆರೋಪ ಮಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಇತ್ತೀಚೆಗೆ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಶ್ರೀರಾಮುಲು ಆರೋಪ ಸಾಬೀತಾದರೇ ರಾಜೀನಾಮೆ ನೀಡುವುದಾಗಿ ಹೇಳಿದ್ದರು.
Key words: Former CM –Siddaramaiah- corruption-Health Minister -Sriramulu