ಬೆಂಗಳೂರು,ಜೂ,13,2020(www.justkannada.in): ಸರ್ಕಾರ ಜಾರಿಗೆ ತರಲು ಹೊರಟಿರುವ ಭೂಸುಧಾರಣಾ ಕಾಯ್ದೆ ತಿದ್ದುಪಡಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ವಿರೋಧ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ, ಕಾಯ್ದೆ ಜಾರಿಗೆ ತರಲು ಸಿದ್ಧರಾಮಯ್ಯ ಸಹಕರಿಸಬೇಕು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಹಲವು ಅನುಕೂಲಗಳಿವೆ. ಇದರಿಂದ ಯಾರೂ ಬೇಕಾದರೂ ಭೂಮಿ ಖರೀದಿಸಬಹುದು. ಕೃಷಿ ಚಟುವಟಿಕೆಗೆ ಅನುಕೂಲವಾಗಲಿದೆ. ರೈತರ ಭೂಮಿಗೆ ಉತ್ತಮ ಬೆಲೆ ಸಿಗುತ್ತದೆ ಎಂದು ನುಡಿದರು.
ಹೀಗಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಜಾರಿಗೆ ಸಹಕರಿಸಬೇಕು. ಇದುಮುಂದೆ ಸಿದ್ಧರಾಮಯ್ಯ ಅವರಿಗೆ ಗೊತ್ತಾಗುತ್ತದೆ. ಕಾಯ್ದೆಗೆ ತಿದ್ದುಪಡಿ ತರುತ್ತಿರುವುದನ್ನ ಎಲ್ಲರೂ ಸ್ವಾಗತಿಸುತ್ತಿದ್ದರೆ. ಸಿದ್ಧರಾಮಯ್ಯ ಜತೆ ನಾನು ಚರ್ಚೆ ಮಾಡುತ್ತೇನೆ. ಈ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಡುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
Key words: Former CM- Siddaramaiah -opposes Land –Acquisition- Act-CM BS Yeddyuarappa