ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಹುಟ್ಟೂರಿನಲ್ಲಿ ‘ರಾಮಮಂದಿರ’ ನಿರ್ಮಾಣ: ಶೇ.80 ರಷ್ಟು ಕಾಮಗಾರಿ ಪೂರ್ಣ…

ಮೈಸೂರು,ಫೆಬ್ರವರಿ,21,2021(www.justkannada.in): ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ನಮ್ಮ ಹೂಟ್ಟೂರಿನಲ್ಲೇ ರಾಮಮಂದಿರ ನಿರ್ಮಾಣ ಮಾಡುತ್ತಿದ್ದೇವೆ ಎಂದು ಹೇಳಿಕೆ ನೀಡಿದ್ದರು.jk

ಸಿದ್ದರಾಮಯ್ಯ ಅವರು ಹೇಳಿದಂತೆ ಅವರ ಹುಟ್ಟೂರು ಸಿದ್ದರಾಮನಹುಂಡಿಯಲ್ಲಿ  ಸುಮಾರು 45 ಲಕ್ಷ ವೆಚ್ಚದಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ. 120 ಅಡಿ ಉದ್ದ 45 ಅಡಿ ಅಗಲದ ನಿವೇಶನ, 40×60 ಅಡಿ ಅಗಲದಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದ್ದು, ಗರ್ಭಗುಡಿ, ಪಾರಾಂಗಣ, ಹೊರಾಂಗಣವನ್ನ ಕಟ್ಟಡ ಹೊಂದಿದೆ. ಗರ್ಭಗುಡಿಯ ಸುತ್ತ 10 ದೇವರುಗಳ ಸ್ಥಾಪನೆಗೆ ಪ್ರಭಾವಳಿಗಳ ನಿರ್ಮಾಣ ಮಾಡಲಾಗುತ್ತಿದೆ.

ಹೆಂಚಿನ ಮನೆಯಲ್ಲಿದ್ದ ರಾಮಮಂದಿರವನ್ನ ಗ್ರಾಮಸ್ಥರು ಜೀರ್ಣೋದ್ಧಾರ ಮಾಡುತ್ತಿದ್ದು, ಇದಕ್ಕೆ ಗ್ರಾಮದ 200 ಜನ ಹಣ ನೀಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಶಾಸಕ ಯತೀಂದ್ರ ಸಹಾಯದ ನೇರವಿನೊಂದಿಗೆ ರಾಮಮಂದಿರದ ಜೀರ್ಣೋದ್ಧಾರ ಕಾರ್ಯ ನೆರವೇರುತ್ತಿದೆ.

I am- building - Ram Mandir -my hometown-Former CM- Siddaramaiah.
siddaramaih#profile..

ಕಳೆದ ಎರಡು ವರ್ಷಗಳಿಂದಲೂ ಕಾಮಗಾರಿ ನಡೆಯುತ್ತಿದ್ದು, ಶೇ 80 ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಇನ್ನು ಏಪ್ರಿಲ್ ವೇಳೆಗೆ ಕಾಮಗಾರಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ರಾಮಮಂದಿರ ನಿರ್ಮಾಣ ಹಿನ್ನೆಲೆ ಸಿದ್ಧರಾಮಯ್ಯನಹುಂಡಿ ಗ್ರಾಮಸ್ಥರು ಈ ಬಾರಿ‌ ವಿಜೃಂಭಣೆಯಿಂದ ರಾಮನವಮಿ ಆಚರಿಸಲು ನಿರ್ಧರಿಸಿದ್ದಾರೆ.

Key words: former cm- siddaramaiah-siddaramaiahnahundi-rama mandir-construction