ಸರ್ಕಾರ ಗಲಭೆಯ ಬೆಂಕಿಯಲ್ಲಿ ರಾಜಕೀಯದ ರೊಟ್ಟಿ ಬಡಿಯುತ್ತಾ ಕೂತಿದೆ – ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು, ಆಗಸ್ಟ್, 19, 2020(www.justkannada.in): ಅತಿವೃಷ್ಟಿಯಿಂದ ರಾಜ್ಯವು ತತ್ತರಿಸಿದೆ. ಆದರೆ, ಬಿಜೆಪಿ ಸರಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯದ ರೊಟ್ಟಿ ಬಡಿಯುತ್ತಾ ಕೂತಿದೆ ಎಂದು ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೊಶ ವ್ಯಕ್ತಪಡಿಸಿದ್ದಾರೆ. jk-logo-justkannada-logo

ಅತಿವೃಷ್ಟಿಯಿಂದ ನೊಂದ ಜನರ ಗೋಳು ಅರಣ್ಯರೋಧನದಂತ್ತಾಗಿದೆ.. ಅತಿವೃಷ್ಟಿಯ ಪರಿಹಾರದಲ್ಲಿ ಕಳೆದ ವರ್ಷದ ವೈಫಲ್ಯ ಈ ಬಾರಿ ಜನರ ಕಷ್ಟ-ಕಾರ್ಪಣ್ಯಗಳನ್ನು ದುಪ್ಪಟ್ಟುಗೊಳಿಸಿದೆ. ಕಂದಾಯ ಸಚಿವರು ಏನು ಮಾಡುತ್ತಿದ್ದಾರೆ?  ಗೃಹಸಚಿವರು ಅತಿವೃಷ್ಟಿ ಸಮೀಕ್ಷೆಗೆ ಪ್ರವಾಸ ಮಾಡುತ್ತಿದ್ದಾರೆ. ಆದರೆ, ಕಂದಾಯ ಸಚಿವರು ಬೆಂಗಳೂರಿನಲ್ಲಿಯೇ ಇದ್ದುಕೊಂಡು ಕಾವಲಭೈರಸಂದ್ರ ಗಲಭೆ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.

ಕಂದಾಯ ಸಚಿವರಿಗೆ ಬೆಂಗಳೂರಿನಲ್ಲಿ ಏನು ಕೆಲಸ..? ಸಿಎಂ ಬಿ.ಎಸ್.ಯಡಿಯೂರಪ್ಪನವರೇ ಮೊದಲು ಇವರನ್ನು ಪ್ರವಾಹಪೀಡಿತ ಪ್ರದೇಶಕ್ಕೆ ಕಳಿಸಿಕೊಡಿ ಎಂದು ಆಗ್ರಹಿಸಿದ್ದಾರೆ. former-cm-siddaramaiah-tweet-bjp-govrnament-bangalore-roit-case

ಸಂತ್ರಸ್ತರ ಪಾಲಿಗೆ ಸರಕಾರ ಸತ್ತುಹೋಗಿದೆ : ಪ್ರವಾಹದಿಂದಾಗಿ ನನ್ನ ಕ್ಷೇತ್ರ ಬಾದಾಮಿಯ ಜನ ಸಂಕಷ್ಟದಲ್ಲಿದ್ದಾರೆ. ಕೊರೋನಾ ಸೋಂಕಿನ ನಂತರ ಕಡ್ಡಾಯ ವಿಶ್ರಾಂತಿಯಲ್ಲಿರುವುದರಿಂದ ಕ್ಷೇತ್ರಕ್ಕೆ ಭೇಟಿ ನೀಡುವ ಸ್ಥಿತಿಯಲ್ಲಿ ನಾನಿಲ್ಲ. ಇದಕ್ಕಾಗಿ ಕ್ಷಮೆಯಿರಲಿ. ಅಧಿಕಾರಿಗಳು ಮತ್ತು ನಮ್ಮ ಪಕ್ಷದ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

key words: former CM- Siddaramaiah-tweet-bjp-govrnament-bangalore-roit case