ಹುಬ್ಬಳ್ಳಿ, ಮಾರ್ಚ್, 30,2021(www.justkannada.in): ಮಾಜಿ ಸಿಎಂ ಸಿದ್ದರಾಮಯ್ಯಗೆ ಸೋಲಿನ ಭೀತಿ ಎದುರಾಗಿದೆ. ಹೀಗಾಗಿ ಮುಂದಿನ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅವರು ನೂರಕ್ಕೆ ನೂರರಷ್ಟು ಸ್ಪರ್ಧಿಸುವುದಿಲ್ಲ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದರು.
ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಎಲ್ಲ ವಿಷಯಗಳಲ್ಲೂ ದ್ವಂದ್ವ ನಿಲುವು ಪ್ರದರ್ಶಿಸುತ್ತಾರೆ. ಅವರದ್ದು ಡಬಲ್ ಸ್ಟಾಂಡರ್ಡ್ ನಿಲುವು, ಮೊದಲು ಚುನಾವಣೆಗೆ ನಿಲ್ಲುವುದಿಲ್ಲ ಎಂದಿದ್ದರು. ಬಳಿಕ ಎರಡೆರಡು ಕಡೆಗಳಲ್ಲಿ ನಿಂತರು. ಈ ಬಾರಿ ಮತ್ತೆ ಬಾದಾಮಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಆದರೆ ಅವರು ಈ ಬಾರಿ ನೂರಕ್ಕೆ ನೂರರಷ್ಟು ಸ್ಪರ್ಧೆ ಮಾಡುವುದಿಲ್ಲ ಎಂದು ಲೇವಡಿ ಮಾಡಿದರು.
ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಚಿವ ಕೆ.ಎಸ್ ಈಶ್ವರಪ್ಪ, ನಮ್ಮ ಸಂಘಟನೆ ನೋಡಿ ಕಾಂಗ್ರೆಸ್, ಜೆಡಿಎಸ್ ಗೆ ದಿಕ್ಕು ತೋಚುತ್ತಿಲ್ಲ. ಹಿಂದಿನ ಎಲ್ಲ ಉಪಚುನಾವಣೆಗಳಲ್ಲಿ ನಾವೇ ಗೆದ್ದಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನ ಪೂರ್ಣ ಬಹುಮತ ನೀಡಿದರೆ ಗೊಂದಲ ಆಗುತ್ತಿರಲಿಲ್ಲ ಎಂದು ಹೇಳಿದರು.
Key words: Former CM- Siddaramaiah- will not -contest -next election-Minister -KS Eshwarappa.