ಮಂಡ್ಯ,ಡಿಸೆಂಬರ್,11,2024 (www.justkannada.in): ನಿನ್ನೆ ವಯೋಸಹಜ ಕಾಯಿಲೆಯಿಂದ ನಿಧನರಾದ ಹಿರಿಯ ನಾಯಕ, ರಾಜಕೀಯ ಮುತ್ಸದ್ಧಿ, ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಯಲ್ಲಿ ನೆರವೇರಿತು.
ನಿನ್ನೆ ಸದಾಶಿವನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇಟ್ಟಿದ್ದ ಎಸ್.ಎಂ ಕೃಷ್ಣಅವರ ಪಾರ್ಥೀವ ಶರೀರವನ್ನ ಇಂದು ಅಂತಿಮಯಾತ್ರೆ ಮೂಲಕ ಹುಟ್ಟೂರು ಸೋಮನಹಳ್ಳಿಗೆ ತರಲಾಯಿತು. ನಂತರ ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಒಕ್ಕಲಿಗ ಸಂಪ್ರದಾಯದಂತೆ ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆ ನೆರವೇರಿತು. ಎಸ್.ಎಂ ಕೃಷ್ಣ ಅವರ ಚಿತೆಗೆ ಮೊಮ್ಮಗ ಅಮರ್ಥ್ಯ ಹೆಗ್ಡೆ ಅಗ್ನಿಸ್ಪರ್ಶ ಮಾಡಿದರು.
ಇದಕ್ಕೂ ಮುನ್ನ ರಾಷ್ಟ್ರಗೀತೆ ನುಡಿಸಿ 3 ಬಾರಿ ಕುಶಾಲತೋಪು ಹಾರಿಸಿ ಎಸ್.ಎಂ.ಕೃಷ್ಣ ಅವರಿಗೆ ಸರ್ಕಾರಿ ಗೌರವ ಸಮರ್ಪಣೆ ಮಾಡಲಾಯಿತು. ವಿವಿಧ ಮಠದ ಸ್ವಾಮೀಜಿಗಳು ಅಂತಿಮ ದರ್ಶನ ಪಡೆದಿದ್ದು, ಅಂತ್ಯಕ್ರಿಯೆ 15 ಜನ ಸ್ವಾಮೀಜಿಗಳು ವೇದ-ಮಂತ್ರಗಳ ಪಠಣ ಮಾಡಿದ್ದಾರೆ.
ಅಂತ್ಯಕ್ರಿಯೆಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಆರ್. ಅಶೋಕ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ರಾಜಕೀಯ ನಾಯಕರು ಭಾಗಿಯಾಗಿದ್ದರು.
Key words: Former CM, SM Krishna, funeral