ನವದೆಹಲಿ,ಆ,25,2020(www.justikannada.in): ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಸಾಕಷ್ಟು ಹೆಸರು ಮಾಡಿದ್ದ ಅಣ್ಣಮಲೈ ಇದೀಗ ತಮಿಳುನಾಡು ಪಾಲಿಟಿಕ್ಸ್ ಗೆ ಎಂಟ್ರಿ ಕೊಟ್ಟಿದ್ದಾರೆ.
ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ. ಅಧಿಕೃತವಾಗಿ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಹಿರಿಯ ನಾಯಕರ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕರ್ನಾಟಕ- ತಮಿಳುನಾಡು ಉಸ್ತುವಾರಿ ಮುರುಳಿಧರ್ ರಾವ್ ಅಣ್ಣಾಮಲೈ ಅವರಿಗೆ ಪ್ರಾಥಮಿಕ ಸದಸ್ಯತ್ವ ನೀಡಿ ಸ್ವಾಗತಿಸಿದರು. ತಮಿಳುನಾಡು ಬಿಜೆಪಿ ಅಧ್ಯಕ್ಷ ಮುರುಗನ್ ಉಪಸ್ಥಿತರಿದ್ದರು.
ಐಪಿಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಹಲವು ಭಾಗಗಳಲ್ಲಿ ಸೇವೆ ಸಲ್ಲಿಸಿ ಜನಮನ ಗೆದ್ಧಿದ್ದ ಅಣ್ಣಾಮಲೈ ಅವರು ಕಳೆದ ಒಂದು ವರ್ಷದ ಹಿಂದೆ ತಮ್ಮ ಸೇವೆಗೆ ರಾಜೀನಾಮೆ ನೀಡಿದ್ದರು.
Key words: Former IPS officer- Annamalai-join- BJP