ವಿಜಯನಗರ,ಜುಲೈ,15,2023(www.justkannada.in): ಮಾಜಿ ಸಚಿವ ಆನಂದ್ ಸಿಂಗ್ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಯ ಪ್ರತಿಷ್ಠಿತ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಜುಲೈ 1ರಿಂದಲೇ ಅನ್ವಯ ಆಗುವಂತೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಗ್ರಾಮೀಣ ಭಾಗದ ರೈತರ ಅನುಕೂಲಕ್ಕೆ ಸ್ಥಾಪಿಸಿರುವ ಸಹಕಾರಿ ಬ್ಯಾಂಕ್ಗೆ 100 ವರ್ಷದ ಇತಿಹಾಸ ಹೊಂದಿದೆ.
Key words: Former minister -Anand Singh – resigned – chairman -BDCC Bank