ಬೆಂಗಳೂರು, ಏಪ್ರಿಲ್ 09,2025 (www.justkannada.in): ಚೆಕ್‌ಬೌನ್ಸ್ ಪ್ರಕರಣದಲ್ಲಿ ಮಾಜಿ ಸಚಿವ , ಶಾಸಕ ಬಿ.ನಾಗಂದ್ರ ಸೇರಿ ಮೂವರು ಆರೋಪಿಗಳಿಗೆ 42ನೇ ಎಸಿಜೆಎಂ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
ಚೆಕ್‌ಬೌನ್ಸ್ ಪ್ರಕರಣದಲ್ಲಿ ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳು 1 ಕೋಟಿ 25 ಲಕ್ಷ ರೂ. ದಂಡ ಪಾವತಿಸುವಂತೆ 42ನೇ ಎಸಿಜೆಎಂ ನ್ಯಾಯಾಧೀಶರಾದ ಕೆ.ಎನ್.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ದಂಡ ಪಾವತಿಸದಿದ್ದರೆ ಒಂದು ವರ್ಷ ಸೆರೆವಾಸ ಅನುಭವಿಸಬೇಕೆಂದು ತೀರ್ಪು ನೀಡಿದ್ದಾರೆ
ಮಾಜಿ ಸಚಿವ ಬಿ.ನಾಗೇಂದ್ರ, ಅನಿಲ್ ರಾಜಶೇಖರ್ ಮತ್ತು ಚುಂಡೂರು ಭಾಸ್ಕರ್ ಮೂವರು ಆರೋಪಿಗಳ ವಿರುದ್ಧ ವಿಎಸ್‌ಎಲ್ ಸ್ಟೀಲ್ಸ್ ಲಿಮಿಟೆಡ್ ಚೆಕ್‌ಬೌನ್ಸ್ ಕೇಸ್ ದಾಖಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಆರೋಪಿಯಾಗಿದ್ದಾರೆ.
Key words: Cheque Bounce Case, Former Minister, B. Nagendra