ಬೆಂಗಳೂರು,ಅಕ್ಟೋಬರ್,23,2024 (www.justkannada.in): ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಟಿಕೆಟ್ ಸಿಗದ ಹಿನ್ನೆಲೆ ಕಾಂಗ್ರೆಸ್ ಸೇರಲು ಮುಂದಾಗಿರುವ ಮಾಜಿ ಸಚಿವ ಸಿಪಿ ಯೋಗೇಶ್ವರ್ ಇದೀಗ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಇಂದು ಬೆಳಗ್ಗೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಕಾಣಿಕೊಂಡು ಅಚ್ಚರಿ ಮೂಡಿಸಿದ ಸಿಪಿ ಯೋಗೇಶ್ವರ್ ನಂತರ ಡಿಕೆ ಶಿವಕುಮಾರ್ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಇದಕ್ಕೂ ಮುನ್ನವೇ ವಾಟ್ಸ್ ಆ್ಯಪ್ ಮೂಲಕ ಬಿಜೆಪಿಗೆ ಸಿಪಿಯೋಗೇಶ್ವರ್ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಸಿಪಿವೈ ಕಾಂಗ್ರೆಸ್ ಸೇರುವುದು ಖಚಿತವಾಗಿದೆ.
Key words: Former minister, CP Yogeshwar, BJP, resignation