ನವದೆಹಲಿ,ಸೆ,1119,2019(www.justkannada.in): ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧಿತರಾಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರನ್ನ ನವದೆಹಲಿಯ ಆರ್ ಎಂಎಲ್ ಆಸ್ಪತ್ರೆಯಿಂದ ತಿಹಾರ್ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಇನ್ನು ಕಳೆದ ಎರಡು ದಿನಗಳಿಂದ ಹೈಬಿಪಿ ಮತ್ತು ಎದೆ ನೋವಿನಿಂದ ಬಳಲುತ್ತಿದ್ದ ಡಿ .ಕೆ ಶಿವಕುಮಾರ್ ಗೆ ದೆಹಲಿಯ ಆರ್ ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಹೀಗಾಗಿ ಆಸ್ಪತ್ರೆ ವರದಿಯ ಆಧಾರದ ಮೇಲೆ ಜೈಲಿಗೆ ಕಳುಹಿಸುವಂತೆ ಕೋರ್ಟ್ ಸೂಚನೆ ನೀಡಿತ್ತು. ಇದೀಗ ಡಿ.ಕೆ ಶಿವಕುಮಾರ್ ಆರೋಗ್ಯ ಸ್ಥಿರವಾಗಿದೆ ಎಂದು ಆರ್ ಎಂಎಲ್ ಆಸ್ಪತ್ರೆ ವೈದ್ಯರು ವರದಿ ನೀಡಿದ್ದಾರೆ. ಅದ್ದರಿಂದ ದೆಹಲಿ ಪೊಲೀಸರು ಡಿ.ಕೆ ಶಿವಕುಮಾರ್ ಅವರನ್ನ ಆಸ್ಪತ್ರೆಯಿಂದ ತಿಹಾರ ಜೈಲಿಗೆ ಕರೆದೊಯ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಡಿ.ಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದ್ದು ಜಾಮೀನು ಸಿಗುವ ನಿರೀಕ್ಷೆಯಲ್ಲಿ ಡಿಕೆ ಶಿವಕುಮಾರ್ ಇದ್ಧಾರೆ.
Key words: Former Minister- DK Shivakumar- Shift- RML Hospital – to-Tihar Jail.